ಅರಕಲಗೂಡು ತಾಲೂಕಿನ ಕೊಣನೂರಿನ ಉಳ್ಳೇನಹಳ್ಳಿ ನಳಂದ ಶಾಲೆಯಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಜಗದೀಶ್, ದಿವ್ಯಾ, ದಿಲೀಪ್, ಅರ್ಪಿತಾ, ನಿಕತ್, ಅಭಿಶ್ರೀ, ಲತಾ, ಸುನಿತಾ ಹಾಗೂ ವಿದ್ಯಾರ್ಥಿಗಳು ಇದ್ದರು. 
ಜಿಲ್ಲೆ

ವಿದ್ಯಾರ್ಥಿಗಳು ಮೊಬೈಲ್ ಗೀಳು ತೊರೆಯಲಿ

ಶಿವಶಂಕರ್ ಎಂ. ಹೆಬ್ಬಳ್ಳ

ಅರಕಲಗೂಡು: ವಿದ್ಯಾರ್ಥಿಗಳು ಮೊಬೈಲ್ ಗೀಳು ತೊರೆದು ಸಂವಿಧಾನ ಪುಸ್ತಕಗಳನ್ನು ಓದಿ ದೇಶದ ಸತ್ಪ್ರಜೆಗಳಾಗಬೇಕು ಎಂದು ಕೊಣನೂರಿನ ಉಳ್ಳೇನಹಳ್ಳಿ ನಳಂದ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ಜಗದೀಶ್ ಹೇಳಿದರು. ತಾಲೂಕಿನ ಕೊಣನೂರಿನ ಉಳ್ಳೇನಹಳ್ಳಿ ನಳಂದ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯರು ಸಂವಿಧಾನದ ಅಡಿಯಲ್ಲಿ ಸಮಾನತೆಯಿಂದ ಬದುಕುತ್ತಿದ್ದು ಒಂದು ಬುಡಕಟ್ಟು ಜನಾಂಗದ ಮಹಿಳೆ ರಾಷ್ಟ್ರಪತಿ ಹುದ್ದೆಗೇರಲು ಸಾಧ್ಯವಾಗಿದೆ. ಎಲ್ಲರೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ. ಇದಕ್ಕೆಲ್ಲ ಡಾ. ಅಂಬೇಡ್ಕರ್ ಅವರ ಕೊಡುಗೆಯೇ ಕಾರಣ ಎಂದರು.

ಸಹ ಶಿಕ್ಷಕರಾದ ದಿವ್ಯಾ, ದಿಲೀಪ್, ಅರ್ಪಿತಾ, ನಿಕತ್, ಅಭಿಶ್ರೀ, ಲತಾ, ಸುನಿತಾ ಹಾಗೂ ವಿದ್ಯಾರ್ಥಿಗಳು ಇದ್ದರು.