ಜಿಲ್ಲೆ

ವಿದ್ಯಾರ್ಥಿಗಳು ಬಾಹ್ಯ ಆಕರ್ಷಣೆಗೆ ಒಳಗಾಗದಿರಿ

ಅರಸೀಕೆರೆ ಗ್ರಾಮಾಂತರ; ಕಾಲೇಜು ವಿದ್ಯಾರ್ಥಿಗಳು ಕಲಿಕಾ ಸಂದರ್ಭದಲ್ಲಿ ಆಕರ್ಷಣೆಗೆ ಒಳಗಾಗಿ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಹಾಸನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಕೆ.ಜಿ.ಕವಿತಾ ಹೇಳಿದರು.

ತಾಲೂಕಿನ ಕಸಬಾ ಹೋಬಳಿಯ ಜಾಜೂರು ಹೊರವಲಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25ನೇ ಸಾಲಿನ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಸದ್ಬಳಕೆ ಮಾಡಿಕೊಳ್ಳಬೇಕು. ಪರಿಶ್ರಮದಿಂದ ಮಾತ್ರ ಸಾಧನೆ ಸಾಧ್ಯ. ಸಾಧಕರನ್ನು ಪ್ರೇರಣೆಯಾಗಿಸಿಕೊಂಡಾಗ ಸಮಸ್ಯೆಗಳನ್ನು ಮೆಟ್ಟಿನಿಂತು ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದರು.

ಕಾಲೇಜಿನ ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಎಚ್.ಪಿ.ಉಷಾ ಕಾಲೇಜು ಎನ್‌ಎಸ್‌ಎಸ್, ರೇಂಜರ್ಸ್ ಮತ್ತು ರೋವರ್ಸ್, ರೆಡ್ ಕ್ರಾಸ್, ಕ್ರೀಡೆ, ಸಾಂಸಕ್ಕತಿಕವಾಗಿ ಆಯೋಜಿಸಿದ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಸಾಧನೆಯ ವರದಿಯನ್ನು ಪ್ರಸ್ತುತಪಡಿಸಿದರು. ಪ್ರಾಂಶುಪಾಲರಾದ ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸಿದ್ದೇಶ್, ಜಾಜೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಲೀಲಾಬಾಯಿ ಚಂದ್ರಶೇಖರ್, ದೈಹಿಕ ಶಿಕ್ಷಣ ನಿರ್ದೇಶಕ ಹರೀಶ್, ಡಾ.ಎಸ್.ನಾರಾಯಣ, ಡಾ.ರಾಜೇಶ್ ಖನ್ನಾ, ಡಾ.ಭಾಸ್ಕರ್, ಡಾ.ಸುನೀಲ್ ಕುಮಾರ್, ಡಾ.ಹರೀಶ್ ಕುಮಾರ್, ಡಾ.ಶಿವಕುಮಾರ್, ರಾಘವೇಂದ್ರ ಹರೀಶ್, ಗಂಗಾ, ಮಮತಾ, ರವೀಶ್, ವಿಶ್ವನಾಥ್, ಕಲಾವತಿ, ಭಾವನ ಇದ್ದರು.