ಹೆಬ್ರಿ: ಮಾದಕ ವಸ್ತುಗಳತ್ತ ಆಕರ್ಷಿತರಾಗುವ ಯುವಜನರು ತಾವೇ ತಮ್ಮ ಭವಿಷ್ಯ ಹಾಳುಮಾಡಿಕೊಳ್ಳುತ್ತಿದ್ದಾರೆ. ಡ್ರಗ್ ಮಾಫಿಯಾಕ್ಕೆ ವಿದ್ಯಾರ್ಥಿಗಳು ಬಲಿಯಾಗದಂತೆ ಜಾಗೃತಿ ಮೂಡಿಸಬೇಕು ಎಂದು ಹಿರಿಯಡಕ ಪೊಲೀಸ್ ಠಾಣೆಯ ಪಿಎಸ್‌ಐ ಪುನೀತ್ ಬಿ.ಇ. ಹೇಳಿದರು.
ರಾಷ್ಟ್ರೀಯ ಮಾದಕ ವಸ್ತು ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ ಅಂಗವಾಗಿ ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡ್ರಗ್ಸ್ ಮತ್ತು ಮಾದಕ ವಸ್ತು ನಿಯಂತ್ರಣ ಸಮಿತಿ ಆಯೋಜಿಸಿದ ಯುವ ಜನತೆ ಮತ್ತು ಮಾದಕ ವಸ್ತುಗಳ ದುರ್ಬಳಕೆಯ ಕುರಿತು ಮಾತನಾಡಿದರು.
ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಎಚ್ ಅಧ್ಯಕ್ಷತೆ ವಹಿಸಿದ್ದರು. ಡ್ರಗ್ಸ್ ಮತ್ತು ಮಾದಕ ವಸ್ತು ನಿಯಂತ್ರಣ ಸಮಿತಿ ನೋಡಲ್ ಅಧಿಕಾರಿ ನಂದೀಶ್ ಕುಮಾರ್ ಕೆ.ಸಿ. ಉಪಸ್ಥಿತರಿದ್ದರು. ಅಪಣಾ ಕೆ.ಯು. ಕಾರ್ಯಕ್ರಮ ನಿರೂಪಿಸಿದರು.