ಜಿಲ್ಲೆ

ಮೊಬೈಲ್‌ನಿಂದ ವಿದ್ಯಾರ್ಥಿಗಳು ದೂರವಿರಲಿ

ವಿವೇಕಾನಂದ ದಾಸನಕೊಪ್ಪ

ಉಪ್ಪಿನಬೆಟಗೇರಿ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಹೆಚ್ಚಾಗಿ ಮಾಡುತ್ತಿದ್ದು, ಅದನ್ನು ನಿಲ್ಲಿಸಿ ಪಠ್ಯಪುಸ್ತಕದತ್ತ ಗಮನಹರಿಸಬೇಕು ಎಂದು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕಿ ಶಿವಲೀಲಾ ಕುಲಕರ್ಣಿ ಹೇಳಿದರು.

ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾದ ಕೊಠಡಿಗಳ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಮಕ್ಕಳು ಮಹಾತ್ಮ ಗಾಂಧೀಜಿಯವರ ತತ್ವ, ಸಿದ್ಧಾಂತಗಳು ಸೇರಿದಂತೆ ನಮ್ಮ ಭಾರತೀಯ ಸಂಸ್ಕೃತಿ ಪರಂಪರೆಯ ಆಧ್ಯಾತ್ಮಿಕ, ಧಾರ್ಮಿಕ ಪುಸ್ತಕಗಳನ್ನು ಅಧ್ಯಯನ ಮಾಡಿ, ಸಚ್ಚಾರಿತ್ರ್ಯವಂತರಾಗಿ ಒಳ್ಳೆಯ ಜೀವನ ನಡೆಸಬೇಕು ಎಂದರು.

ಕರಡಿಗುಡ್ಡ ಶಂಕರಾನಂದ ಮಠದ ಶಂಕರಾನಂದ ಸ್ವಾಮೀಜಿ ಸಾನ್ನಿಧ್ಯ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸಲಿಂಗಪ್ಪ ಮಂಗಳಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ನಂದೀಶ ಕಾಖಂಡಕಿ, ಉಮಾಕಾಂತ ಕರ್ಚಕಟ್ಟಿ, ಬಸವರಾಜ ಕುರಗುಂದ, ಶೇಖರ ಮಂಗಳಗಟ್ಟಿ, ಮಹಾಬಳೇಶ್ವರ ಸಂಗಪ್ಪನವರ, ಶಿವಾನಂದ ಹೂಗಾರ, ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.