ಜಿಲ್ಲೆ

ಘನತ್ಯಾಜ್ಯ ವಿಲೇವಾರಿಗೆ ಸುಭಾಷ್ ಆಡಿ ಸೂಚನೆ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ನಗರದಲ್ಲಿ ಜನರು ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಾರೆ. ತ್ಯಾಜ್ಯವನ್ನು ಸಂಗ್ರಹಿಸಿ ಸಮರ್ಪಕವಾಗಿ ವಿಲೇವಾರಿ ಮಾಡಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿ ಅಧ್ಯಕ್ಷ, ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ ಹೇಳಿದರು.

ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಧಾರವಾಡ ವಿಭಾಗ, ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ, ರೈಲ್ವೆ, ವಾಯವ್ಯ ಸಾರಿಗೆ ಸಂಸ್ಥೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆಗೆ ಇಲ್ಲಿನ ರ್ಸಟ್ ಹೌಸ್​ನಲ್ಲಿ ಸೋಮವಾರ ಆಯೋಜಿಸಿದ್ದ ಘನತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಪುನರ್ ಬಳಕೆ ಪ್ಲಾಸ್ಟಿಕ್ ಹೆಚ್ಚಾಗಿ ಬಳಕೆ ಮಾಡಬೇಕು. ಪ್ಲಾಸ್ಟಿಕ್ ಘನ ತ್ಯಾಜ್ಯ, ಮರು ಬಳಕೆ ಮಾಡಲಾಗದ ಪ್ಲಾಸ್ಟಿಕ್​ಗೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗಬೇಕಿದೆ. ವಿಷಕಾರಿ ವಸ್ತುಗಳನ್ನು ಆದಷ್ಟು ಸೂಕ್ಷ ವಾಗಿ ವಿಲೇವಾರಿ ಮಾಡಬೇಕು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಬಗ್ಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಶಾಲೆಗಳಲ್ಲಿ ಹಸಿರು ಕ್ಯಾಂಪಸ್ ನಿಮಾಣ ಮಾಡಲು ಕ್ರಮ ವಹಿಸಬೇಕು. ಬಸ್ ನಿಲ್ದಾಣ, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಖಾಸಗಿ ಶಾಲಾ- ಕಾಲೇಜುಗಳು, ವಿಶ್ವವಿದ್ಯಾಲಯ, ಬ್ಯಾಂಕ್​ಗಳು ಮತ್ತಿತರ ಕಡೆಗಳಲ್ಲೂ ಸಹ ಹಸಿರೀಕರಣ ನಿಮಾಣಕ್ಕೆ ಒತ್ತು ನೀಡಬೇಕು ಎಂದು ನಿರ್ದೇಶನ ನೀಡಿದರು.

ಖಾಲಿ ನಿವೇಶನಗಳಲ್ಲಿ ಕಸ ಹಾಕದಂತೆ ಎಚ್ಚರಿಕೆ ವಹಿಸುವಂತೆ ನಿವೇಶನಗಳ ಮಾಲೀಕರಿಗೆ ಸೂಚನೆ ನೀಡಬೇಕು. ಮರಗಳು ಬೆಳೆಯದಂತೆ ಮಾಲೀಕರು ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೇ ಇದ್ದರೆ ನೋಟೀಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನೀರು ಸಂರಕ್ಷಣೆ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಬೇಕು. ನೀರು ಮಿತವಾಗಿ ಬಳಸುವಂತೆ ತಿಳಿಸಬೇಕು. ನೀರು ಪೋಲಾಗುವುದನ್ನು ತಡೆಯಬೇಕು. ಬೆಂಗಳೂರಿನಲ್ಲಿ ನಿಮಾಣವಾದಂತ ಸ್ಥಿತಿ ಇಲ್ಲಿಯೂ ನಿಮಾಣವಾಗಬಾರದು. ಅಪಾರ್ಟ್​ವೆುಂಟ್, ಹೋಟೆಲ್, ಬಾರ್ ರೆಸೊ್ಟೕರೆಂಟ್, ಮಾಲ್​ಗಳು, ಅಸ್ಪತ್ರೆಗಳು, ಕಲ್ಯಾಣ ಮಂಟಪ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹಿಸಿ, ವಿಲೇವಾರಿ ಮಾಡಬೇಕು. ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸುವುದು ಬಹಳ ಮುಖ್ಯ ಎಂದು ಹೇಳಿದರು.

ರೈಲು ನಿಲ್ದಾಣಗಳಲ್ಲಿ ಹಸರೀಕರಣಕ್ಕೆ ಒತ್ತು ನೀಡಬೇಕು. ಪ್ರಯಾಣಿಕರು ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಪ್ಲಾಟಫಾರಂಗಳಲ್ಲಿ ಎಸೆಯುತ್ತಾರೆ. ಅವುಗಳನ್ನು ತಡೆಯುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.

ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಮಾತನಾಡಿ, ಈಗಾಗಲೇ ಪ್ಲಾಸ್ಟಿಕ್ ಉತ್ಪಾದನೆ ಮಾಡುತ್ತಿದ್ದ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. 10 ಟನ್​ಗೂ ಅಧಿಕ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ಲಾಸ್ಟಿಕ್ ಉತ್ಪಾದನೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಮಾಲೀಕರಿಗೆ ಸೂಚನೆ ನೀಡಲಾಗಿದೆ. ದಂಡವನ್ನು ಸಹ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಿಒಪಿ ಗಣಪತಿ ಬಗ್ಗೆ ಎಚ್ಚರ: ಪ್ಲಾಸ್ಟರ್ ಆಫ್ ಪ್ಯಾರಿಸ್ ( ಪಿಒಪಿ) ಗಣಪತಿಗಳನ್ನು ಮಾರಾಟ ಮಾಡುವುದನ್ನು ತಡೆಯಬೇಕು. ಪಿಒಪಿ ಗಣಪತಿ ತಯಾರಿಸುವ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಬೇಕು. ಜನರು ಮಣ್ಣಿನ ಗಣಪತಿಗಳನ್ನು ಖರೀದಿಸುವಂತೆ ಪ್ರೇರೇಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಸ್ಮಾರ್ಟ್​ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ರುದ್ರೇಶ ಗಾಳಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.