ರಾಯಚೂರು ಕೇಂದ್ರದ ಜಲಸಂಪನ್ಮೂಲ ನದಿ ಅಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ಸುಭೋದ್ ಯಾದವ್ ಶುಕ್ರವಾರ ನಗರದ ಸೇರಿದಂತೆ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು.
ಮೊದಲಿಗೆ ಗ್ರಾಮೀಣ ಪ್ರದೇಶದಲ್ಲಿ ಸಂಚಾರ ಕೈಗೊಂಡರು. ಮಹತ್ವಕಾಂಕ್ಷೆಯ ಜಿಲ್ಲೆಯ ಬ್ಲಾಕಗಳಾದ ಸಿರವಾರ ಮತ್ತು ಮಸ್ಕಿ ತಾಲೂಕಿನ ಕಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಮಾನ್ವಿ ಪಟ್ಟಣದ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿಂದ ನೇರವಾಗಿ ರಾಯಚೂರಿನ ಮಾವಿನಕೆರೆ ಪ್ರದೇಶಕ್ಕೆ ಆಗಮಿಸಿ ಅಲ್ಲಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಜಿಲ್ಲೆಯ ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಪರಿಶೀಲನೆಗಾಗಿ ಕೇಂದ್ರ ಸರ್ಕಾರದಿಂದ ತಜ್ಞರ ತಂಡಗಳನ್ನು ಜಿಲ್ಲೆಗೆ ಕಳುಹಿಸಿ ಕೊಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಐಎಎಸ್ ಪ್ರೊಬೇಷನರಿ ಅಧಿಕಾರಿ ಪುರುರಾಜ್‌ಸಿಂಗ್, ಜಿಪಂ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಮಹತ್ವಕಾಂಕ್ಷೆಯ ಯೋಜನೆಯ ಜಿಲ್ಲಾ ಸಂಯೋಜಕಿ ಸೌಮ್ಯ ಸೇರಿದಂತೆ ಅನೇಕರು ಇದ್ದರು.