ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ರಾಜಾ ಅಮರೇಶ್ವರ ನಾಯಕ ಸೋಮವಾರ ನಾಮಪತ್ರ ಸಲ್ಲಿಸಿದರು. ಪುತ್ರ ರಾಜಾ ನಹುಷಾ ವರ್ಷ, ಸೂಚಕ ಹಲ್ಲಪ್ಪ, ನ್ಯಾಯವಾದಿ ರಾಘವೇಂದ್ರ ಚೂಡಾಮಣಿ, ಲೆಕ್ಕ ಪರಿಶೋಧಕ ಸುೀರಂಜನ್ ಕಸ್ಬೆ ಇದ್ದರು. 
ಜಿಲ್ಲೆ

ಇಬ್ಬರಿಂದ ನಾಮಪತ್ರ ಸಲ್ಲಿಕೆ

ರಾಚಯ್ಯ ಸ್ವಾಮಿ

ರಾಯಚೂರು: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಲ್ಕು ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಯಚೂರು ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ದೇವಣ್ಣ ನಾಯಕ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆ ನಂತರ ರಾಜಾ ಅಮರೇಶ್ವರ ನಾಯಕ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಒಳ್ಳೆಯ ದಿನ ಎನ್ನುವ ಕಾರಣಕ್ಕೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಗಿದ್ದು, ಏ.18ರಂದು ಪಕ್ಷದ ಹಿರಿಯ ನಾಯಕರು ಮತ್ತು ಮುಖಂಡರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನ್ಯಾಯವಾದಿ ಕೆ.ದೇವಣ್ಣ ನಾಯಕ, ಪಕ್ಷದ ಅಭ್ಯರ್ಥಿಯೆಂದು ಘೋಷಣೆಯಾಗಿರುವ ಜಿ.ಕುಮಾರನಾಯಕಗೆ ಪಕ್ಷದಿಂದ ಇನ್ನೂ ಬಿ ಾರಂ ಕೊಟ್ಟಿಲ್ಲ. ಕೊನೆ ಕ್ಷಣದವರೆಗೂ ಪಕ್ಷ ನನಗೆ ಬಿ ಾರಂ ಕೊಡುವ ವಿಶ್ವಾಸವಿದೆ. ನಾನು ಬಂಡಾಯ ಅಭ್ಯರ್ಥಿಯಲ್ಲ. ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.
ಈ ಸಂದರ್ಭದಲ್ಲಿ ಚುನಾವಣಾಕಾರಿ ಹಾಗೂ ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಅಪರ ಜಿಲ್ಲಾಕಾರಿ ಚಂದ್ರಶೇಖರ ನಾಯಕ ಉಪಸ್ಥಿತರಿದ್ದರು.