ಚಾಮರಾಜನಗರ : ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಗುರುವಾರ ಹನೂರು ತಾಲೂಕು ರೈತ ಸಂಘದ ಪದಾಧಿಕಾರಿಗಳು ಗ್ರೇಡ್- 2 ತಹಸೀಲ್ದಾರ್ ಧನಂಜಯ ಅವರಿಗೆ ಮನವಿ ಸಲ್ಲಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಜಾದ್‌ಖಾನ್ ಮಾತನಾಡಿ, ತಾಲೂಕಿನಲ್ಲಿ ರೈತರಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳು ಸಮರ್ಪಕವಾಗಿ ದೊರಕುತ್ತಿಲ್ಲ. ಇತ್ತ ಜಮೀನಿಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ.
ಇದರಿಂದ ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರಲ್ಲದೇ ಚಂಗದಾರಹಳ್ಳಿ ಸರ್ವೇ ನಂ. 171ರಲ್ಲಿ 0.61 ಸೆಂಟ್ ಜಾಗವನ್ನು ಸ್ಮಶಾನಕ್ಕೆ ಮಂಜೂರು ಮಾಡುವಂತೆ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರ್ ಧನಂಜಯ, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಸಂಘದ ಉಪಾಧ್ಯಕ್ಷ ಪಳನಿಸ್ವಾಮಿ, ಗ್ರಾಮ ಘಟಕದ ಅಧ್ಯಕ್ಷ ಪಳನಿಶೆಟ್ಟಿ, ಪದಾಧಿಕಾರಿಗಳಾದ ಚಿನ್ನತಂಬಿ, ಈಶ್ವರನ್, ಹರಿಹರ, ಮುರುಗನ್, ಬಾಲಸುಬ್ರಹ್ಮಣ್ಯಂ, ಚಿನ್ನಸ್ವಾಮಿ, ಮಾರಿಮುತ್ತು ಇತರರು ಇದ್ದರು.