ಜಿಲ್ಲೆ

ಸಿ-ವಿಜಿಲ್ ಆಪ್‌ನಲ್ಲಿ ದೂರು ಸಲ್ಲಿಸಿ

ಎಸ್.ಎರ್ರಿಸ್ವಾಮಿ

ಬಳ್ಳಾರಿ : ಸಂಡೂರು ಉಪಚುನಾವಣೆಯಲ್ಲಿ ಮತದಾರರಿಗೆ ಅಮಿಷ, ಅಕ್ರಮ ಪ್ರಚಾರ ಹಾಗೂ ಸರ್ಕಾರಿ ಸಂಪನ್ಮೂಲಗಳ ದುರುಪಯೋಗವನ್ನು ಸಾರ್ವಜನಿಕರು ಸಿ- ವಿಜಿಲ್ ಆ್ಯಪ್‌ನಲ್ಲಿ ದೂರು ಸಲ್ಲಿಸಬಹುದು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ತಿಳಿಸಿದ್ದಾರೆ.

ಡಿಸಿ ಕಚೇರಿ ಆವರಣದಲ್ಲಿ ಈಗಾಗಲೇ ಸಿ-ವಿಜಿಲ್ ತಂಡ ಕಾರ್ಯಗತವಾಗಿದೆ. ಉಪ ಚುನಾವಣೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 16 ದೂರುಗಳು ಸಿ-ವಿಜಿಲ್ ಮುಖಾಂತರ ದಾಖಲಾಗಿದ್ದು, 13 ಪ್ರಕರಣಗಳು ವಿಲೇವಾರಿ ಮಾಡಲಾಗಿದೆ. ಮತದಾರರ ಸಹಾಯವಾಣಿ ಸಂಖ್ಯೆ 1950 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.