ಮಡಿಕೇರಿ: ಆನ್ಯಾಳ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ನೀರಿನ ವ್ಯವಸ್ಥೆಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎ.ಎಸ್.ಪೊನ್ನಣ್ಣರವರು ಧನ ಸಹಾಯ ನೀಡಿದರು.
ಚೆಂಬು ಗ್ರಾಮಕ್ಕೆ ಭೇಟಿ ನೀಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎ.ಎಸ್.ಪೊನ್ನಣ್ಣರವರು ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರೊಂದಿಗೆ ಸಮಾಲೋಚಿಸಿದರು.
ನಂತರ ಆನ್ಯಾಳ ಶ್ರೀ ವಿಷ್ಣುಮೂರ್ತಿ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ದೇವಸ್ಥಾನದ ಮುಖ್ಯಸ್ಥ ಬಾಲಂಬಿ ಸೋಮಣ್ಣರವರು ಸಾವಿರಾರು ಭಕ್ತಾದಿಗಳು ಸೇರುವ ಉತ್ಸವದ ಸಂದರ್ಭದಲ್ಲಿ ಎದುರಾಗುವ ನೀರಿನ ಸಮಸ್ಯೆಯ ಬಗ್ಗೆ ಹೇಳಿಕೊಂಡರು. ಕೂಡಲೇ ಸ್ಪಂದಿಸಿದ ಪೊನ್ನಣ್ಣರವರು, ನೀರಿನ ವ್ಯವಸ್ಥೆಯ ಸಂಪೂರ್ಣ ವೆಚ್ಚಕ್ಕೆ ಧನ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷ ರವಿರಾಜ್ ಹೊಸೂರು, ಮತ್ತಿತರರು ಉಪಸ್ಥಿತರಿದ್ದರು.