ಹುಬ್ಬಳ್ಳಿ: ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಆ. 5ರಂದು ಆಯೋಜಿಸಿರುವ ಎಸ್ಯುುಸಿಐ (ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ) ಪಕ್ಷದ ಸಂಸ್ಥಾಪಕ ಶಿವದಾಸ್ ಘೊಷ್ ಅವರ ಜನ್ಮ ಶತಮಾನೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಲು ಧಾರವಾಡ ಜಿಲ್ಲೆಯ ಕಾರ್ಯಕರ್ತರು ಗುರುವಾರ ಹುಬ್ಬಳ್ಳಿಯಿಂದ ಅಮರಾವತಿ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣ ಬೆಳೆಸಿದರು.
ಎಸ್ಯುುಸಿಐ ಜಿಲ್ಲಾ ಸಮಿತಿ ಸದಸ್ಯರಾದ ಗಂಗಾಧರ ಬಡಿಗೇರ, ಭುವನಾ, ಭವಾನಿ ಶಂಕರ ಗೌಡ, ದೀಪಾ ಧಾರವಾಡ, ಮಧುಲತಾ ಗೌಡರ್, ಇತರರು ಇದ್ದರು.
ಕಾರ್ಯಕ್ರಮದಲ್ಲಿ ದೇಶದ ವಿವಿಧೆಡೆಯಿಂದ ರೈತರು, ವಿದ್ಯಾರ್ಥಿಗಳು, ಯುವಕರು ಹಾಗೂ ಮಹಿಳೆಯರು ಭಾಗವಹಿಸಲಿದ್ದಾರೆ. ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಎಸ್ಯುುಸಿಐ ಪ್ರಧಾನ ಕಾರ್ಯದರ್ಶಿ ಪ್ರವಾಶ ಘೊಷ್ ಮುಖ್ಯ ಭಾಷಣಕಾರರಾಗಿ ಪಾಲ್ಗೊಳ್ಳುವರು. ಪಾಲಿಟ್ ಬ್ಯೂರೋ ಸದಸ್ಯ ಕರ್ನಾಟಕದ ಕೆ.ರಾಧಾಕೃಷ್ಣ ಅಧ್ಯಕ್ಷತೆ ವಹಿಸುವರು.