ಜಿಲ್ಲೆ

ಸಹಕಾರಿ ಸಂಘದ ಅಧ್ಯಕ್ಷ ಸುಧೀರ್‌ಕುಮಾರ್

ಪಡುಬಿದ್ರಿ: ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾಗಿ ವೈ.ಸುಧೀರ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗುರುರಾಜ ಪೂಜಾರಿ ಅವಿರೋಧ ಆಯ್ಕೆಯಾದರು. ನಿರ್ದೇಶಕರಾಗಿ ಶಿವರಾಮ ಶೆಟ್ಟಿ, ಗಿರೀಶ್ ಪಲಿಮಾರು, ವಾಸುದೇವ ದೇವಾಡಿಗ, ಜಿತೇಂದ್ರ, ಮಾಧವ ಆಚಾರ್ಯ, ರಾಜಾರಾಮ ರಾವ್, ಹಸನ್ ಬಾವ, ರೋಹಿಣಿ ಎ, ಕುಸುಮಾ ಕರ್ಕೇರ, ಕೃಷ್ಣ ಬಂಗೇರ ಹಾಗೂ ಕಾಂಚನಾ ಆಯ್ಕೆಯಾಗಿದ್ದಾರೆ. ಬಳಿಕ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಲಾಯಿತು. ಎಸ್‌ಡಿಸಿಸಿ ಬ್ಯಾಂಕ್ ಪ್ರತಿನಿಧಿ ಬಾಲಗೋಪಾಲ ಬಲ್ಲಾಳ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ.ಎಚ್. ಮತ್ತಿತರರಿದ್ದರು. ಜ.28ರಂದು ಚುನಾವಣೆ ನಡೆದಿದ್ದು, ಸಹಕಾರಿ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.