ಜಿಲ್ಲೆ

ಧಾರವಾಡ ಪುಡಕಲಕಟ್ಟಿಯಲ್ಲಿ ಮೃಣಾಲ್ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮಂಜುನಾಥ ಕೋಳಿಗುಡ್ಡ
ಬೆಳಗಾವಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಿದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಶುಕ್ರವಾರ ಮೃಣಾಲ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ, ಅಧ್ಯಕ್ಷ ಮೃಣಾಲ ಹೆಬ್ಬಾಳ್ಳಕರ್ ಭಾಗವಹಿಸಿದ್ದರು. ಧಾರವಾಡ ಜಿಲ್ಲೆಯ ಪುಡಕಲಕಟ್ಟಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮೃಣಾಲ್ ಶುಗರ್ಸ್ ಕಾರ್ಖಾನೆಯನ್ನು ಪರಿಗಣಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಹ್ವಾನದ ಮೇರೆಗೆ ಸಮಾವೇಶದಲ್ಲಿ ಭಾಗವಹಿಸಿದ್ದ ಮೃಣಾಲ್ ಹೆಬ್ಬಾಳ್ಕರ್, ಸಕ್ಕರೆ ಕಾರ್ಖಾನೆ ಸ್ಥಾಪನೆಯಿಂದ ಸುತ್ತಮುತ್ತಲಿನ ಸಾವಿರಾರು ಬಡ ಜನರಿಗೆ ಉದ್ಯೋಗ ಕಲ್ಪಿಸಿ ಕೊಡಲಾಗುವುದು ಎಂದು ಘೋಷಿಸಿದರು. ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಗ್ರೀಸ ದೇಶದ ಮಾಜಿ ಪ್ರಧಾನಿ ಜಾರ್ಜ್ ಪಪ್ಯಾಂಡ್ರಿಯೋ ಸಮ್ಮುಖದಲ್ಲಿ ಮೃಣಾಲ ಹೆಬ್ಬಾಳ್ಳಕರ್ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕಾ ಖರ್ಗೆ, ಕೇಂದ್ರ ಸಚಿವ ವಿ.ಸೋಮಣ್ಣ, ಸಂಸದರಾದ ಶಶಿ ತರೂರ ಇತರರಿದ್ದರು.
--