ಜಿಲ್ಲೆ

ಜಿಲ್ಲೆಯಲ್ಲಿ ಸುಗಮ್ಯ ಭಾರತ ಅಭಿಯಾನ

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಸುಗಮ್ಯ ಭಾರತ ಅಭಿಯಾನದಡಿ ವಿಕಲಚೇತನರು ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಹೊರಾಂಗಣ ಮತ್ತು ಒಳಾಂಗಣ ಪ್ರದೇಶದಲ್ಲಿ ಯಾವುದೇ ಅಡೆ ತಡೆಗಳಿಲ್ಲದೆ ಸುಗಮವಾಗಿ ಸಂಚರಿಸುವಂತೆ ಮಾಡುವುದು ಸುಗಮ್ಯ ಭಾರತ ಅಭಿಯಾನದ ಉದ್ದೇಶವಾಗಿದ್ದು ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.

ದೇವನಹಳ್ಳಿ ತಾಲೂಕು ಜಿಲ್ಲಾಡಳಿತಭವನದಲ್ಲಿ ಸುಗಮ್ಯ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ರಾಜ್ಯಾದ್ಯಂತ ಈ ಸುಗಮ್ಯ ಯಾತ್ರಾ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮೂಲ ಸೌಕರ್ಯಗಳಾದ ಶೌಚಗೃಹ, ಇಳಿಜಾರು ಮೆಟ್ಟಿಲುಗಳು ಮತ್ತು ಸೂಚನಾ ಫಲಕಗಳನ್ನು ಅಚ್ಚುಕಟ್ಟಾಗಿ ಒಳಗೊಂಡಿರಬೇಕು ಎಂದು ತಿಳಿಸಿದರು. ವಿಕಲಚೇತನ ವ್ಯಕ್ತಿಗಳ ಬಗ್ಗೆ ಮಾಹಿತಿ ಕ್ರೋಢೀಕರಿಸಲು ಕೇಂದ್ರ ಸರ್ಕಾರ ರಾಜ್ಯದ ಛಿ ಅಟ್ಚಜಿಠಿಜಿಟ್ಞ ಟ್ಛ ಛಿಟಟ್ಝಛಿ ಡಿಜಿಠಿ ಈಜಿಚಿಜ್ಝಿಜಿಠಿ(ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ಸಂಘ) ಬೆಂಗಳೂರು ಸಂಸ್ಥೆಯೊಂದಿಗೆ ಈ ಒಪ್ಪಂದ ಮಾಡಿಕೊಂಡಿದೆ. ಅದರಂತೆ ಇದರ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಲು ್ಗಛಿ ಠಿಟ ಅ್ಚ್ಚಛಿ ಎಂಬ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದ್ದು, ಎಲ್ಲರೂ ಈ ಅಪ್ಲಿಕೇಶನ್ ಅನ್ನು ಮೊಬೈಲ್ ನಲ್ಲಿ ಸುಲಭವಾಗಿ ಬಳಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಈ ಅಪ್ಲಿಕೇಶನ್ ಅನ್ನು ಎಡಿಪಿ ಸಂಸ್ಥೆಯ ಗಿರಿಜಮ್ಮ ಸ್ಥಳದಲ್ಲಿಯೇ ಪ್ರಾಯೋಗಿಕವಾಗಿ ಯಾವ ರೀತಿ ಬಳಸಬಹುದು ಎಂಬ ಮಾಹಿತಿ ನೀಡಿದರು.