ಮಂಡ್ಯ: ಮಂಡ್ಯ ವಿಶ್ವವಿದ್ಯಾನಿಲಯ ನೂತನವಾಗಿ ಪ್ರಾರಂಭವಾಗಿದೆ. ಆದ್ದರಿಂದ ವಿವಿಗೆ ಗೀತೆ ಮತ್ತು ಆವರಣಕ್ಕೆ ಸೂಕ್ತ ಹೆಸರು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಹವ್ಯಾಸಿ ಸಾಹಿತಿಗಳು, ಬರಹಗಾರರು, ಹಾಡುಗಾರರಿಂದ ಜಿಲ್ಲೆಯ ಸಮಗ್ರ ಇತಿಹಾಸ, ಸಾಹಿತ್ಯ ಜಾನಪದ, ವಿದ್ವಾಂಸರು, ಸ್ವಾತಂತ್ರ್ಯ, ಕೃಷಿ, ನೀರಾವರಿ ಹಾಗೂ ಸಾಮಾಜಿಕ ಆರ್ಥಿಕ ಐತಿಹ್ಯ ಒಳಗೊಂಡ ’ವಿಶ್ವವಿದ್ಯಾಲಯ ಗೀತೆ’ ಮತ್ತು ’ವಿಶ್ವವಿದ್ಯಾಲಯದ ಆವರಣಕ್ಕೆ ಸೂಕ್ತ ಹೆಸರನ್ನು’ ಆಹ್ವಾನಿಸಲಾಗಿದೆ.
ಆಸಕ್ತರು ಆ.23ರೊಳಗೆ ಮಂಡ್ಯ ವಿಶ್ವವಿದ್ಯಾಲಯ ಕುಲಸಚಿವರಿಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಈ ನಿಟ್ಟಿನಲ್ಲಿ ರಚಿಸಿರುವ ಸಮಿತಿಯ ತೀರ್ಪು ಅಂತಿಮವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.