ಜಿಲ್ಲೆ

ಹಿಂಗಾರು ಬೆಳೆ ಸಮೀಕ್ಷೆ ಮಾಡಿಸಲು ಸಲಹೆ

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರ 2024- 25ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ ಮಾಡಿದೆ. ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ನೋಂದಾಯಿಸಬೇಕು. ಸರ್ಕಾರದ ವಿವಿಧ ಯೋಜನೆಗಳಾದ ಫಸಲ್ ಬಿಮಾ ಯೋಜನೆ, ಬೆಳೆ ಪರಿಹಾರ, ಬೆಂಬಲ ಬೆಲೆ ಯೋಜನೆಗಳ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಅವಶ್ಯಕ. ಆದ್ದರಿಂದ ಬೆಳೆ ವಿಮೆ ಮಾಡಿಸಿದ ರೈತರು ಕಡ್ಡಾಯವಾಗಿ ತಾವು ಬೆಳೆದ ಬೆಳೆಯ ಸಮೀಕ್ಷೆ ಮಾಡಿ ನೋಂದಾಯಿಸಬೇಕು. ಬೆಳೆ ಸಮೀಕ್ಷೆ ಆ್ಯಪ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿದೆ ಎಂದು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ ಅಣಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.