ವಿಜಯವಾಣಿ ಸುದ್ದಿಜಾಲ ಉಡುಪಿ
ನಮ್ಮ ವಿಶ್ವ ಗೀತಾ ಪರ್ಯಾಯದ ಸಂದರ್ಭದಲ್ಲಿ ನಡೆದಿದ್ದ ಉಡುಪಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸು ನೋಡಿ ಸಂತಸವಾಗಿದೆ. ಮುಂದಿನ ದಿನಗಳಲ್ಲೂ ಕಸಾಪ ಹಮ್ಮಿಕೊಳ್ಳುವ ಎಲ್ಲ ಕನ್ನಡಪರ ಕಾರ್ಯಕ್ರಮ ಯಶ ಕಾಣಲಿ ಎಂದು ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾರೈಸಿದರು.
ಉಡುಪಿ ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ರಾಜಾಂಗಣದಲ್ಲಿ ನಡೆದಿದ್ದ ಸಮ್ಮೇಳನಕ್ಕೆ ಸರ್ವ ಸಹಕಾರ ನೀಡಿದ್ದಕ್ಕೆ ಜಿಲ್ಲಾ ಕಸಾಪದ ಅಧ್ಯಕ್ಷರು ಹಾಗೂ ಪಾದಾಧಿಕಾರಿಗಳು ಮೇ 25ರಂದು ಗೀತಾ ಮಂದಿರದಲ್ಲಿ ಸಲ್ಲಿಸಿದ ಕೃತಜ್ಞತೆ ಸ್ವೀಕರಿಸಿ ಆಶೀರ್ವಚನ ನೀಡಿದರು.
ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಶ್ರೀಗಳನ್ನು ಗೌರವಿಸಿದರು.
ಕಾಪು ಕಸಾಪ ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಸಂಘಟನಾ ಕಾರ್ಯದರ್ಶಿ ಸತೀಶ ವಡ್ಡರ್ಸೆ, ಸಹ ಕಾರ್ಯದರ್ಶಿ ಡಾ. ರಘು ನಾಯ್ಕ, ಕಸಾಪ ಮಾಧ್ಯಮ ಪ್ರತಿನಿಧಿ ನರಸಿಂಹ ಮೂರ್ತಿ ರಾವ್, ಸೂರಾಲು ನಾರಾಯಣ ಮಡಿ, ಮಡಿ ವಿಶ್ವನಾಥ ಖಾರ್ವಿ, ಶ್ರೀಮಠದ ನಾಗರಾಜ ಆಚಾರ್ಯ, ರಮೇಶ ಭಟ್, ರಮಣ ಆಚಾರ್ಯ ಇದ್ದರು.
ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಜಿಲ್ಲಾ ಗೌರವ ಕಾರ್ಯದರ್ಶಿ ನರೇಂದ್ರಕುಮಾರ್ ಕೋಟ ವಂದಿಸಿದರು.