ಜಿಲ್ಲೆ

ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ ಎನ್​ಐಎ ತನಿಖೆ ಸ್ವಾಗತಾರ್ಹ

ಗೋಪಾಲಕೃಷ್ಣ ಪಾದೂರ್

ಉಡುಪಿ: ಹಿಂದೂ ಸಂಟನೆ ಕಾರ್ಯಕರ್ತ ಸುಹಾಸ್​ ಶೆಟ್ಟಿ ಬರ್ಬರ ಹತ್ಯೆಯ ತನಿಖೆಯನ್ನು ಎನ್​ ಐ ಎ ತನಿಖೆಗೆ ವರ್ಗಾಯಿಸಿದ ಕೇಂದ್ರ ಸರ್ಕಾರದ ಗೃಹ ಇಲಾಖೆ ನಿರ್ಧಾರ ಸ್ವಾಗತಾರ್ಹ ಎಂದು ಶಾಸಕ ಯಶ್​ ಪಾಲ್​ ಸುವರ್ಣ ತಿಳಿಸಿದ್ದಾರೆ.

ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿ ಮತಾಂಧ ಶಕ್ತಿಗಳು ಅಮಾನುಷವಾಗಿ ಬಜ್ಪೆ ಪೇಟೆಯಲ್ಲಿ ಸುಹಾಸ್​ ಶೆಟ್ಟಿ ಹತ್ಯೆ ಮಾಡಿ ಕರಾವಳಿ ಜಿಲ್ಲೆಯ ಕಾನೂನು ಸುವ್ಯವಸ್ಥೆಗೇ ಸವಾಲು ಹಾಕಿದ್ದರು. ಈ ಪ್ರಕರಣವನ್ನು ಎನ್​ ಐ ಎ ತನಿಖೆಗೆ ನೀಡುವಂತೆ ಸುಹಾಸ್​ ಶೆಟ್ಟಿ ತಂದೆ ಮತ್ತು ತಾಯಿ ಮಾಡಿದ ಮನವಿಯನ್ನು ಕೇಂದ್ರ ಸರ್ಕಾರ ಪುರಸ್ಕರಿಸಿದೆ. ತನಿಖೆಯ ಮೂಲಕ ಸುಹಾಸ್​ ಶೆಟ್ಟಿ ಹತ್ಯೆಯಲ್ಲಿ ಪಾಲ್ಗೊಂಡ ಮತಾಂಧ ಶಕ್ತಿಗಳು, ಆರ್ಥಿಕ ಸಹಕಾರ ನೀಡಿರುವ ಕಾಣದ ಕೈಗಳು ಹಾಗೂ ಕರಾವಳಿ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ನಿಷೇಧಿತ ಮತೀಯ ಸಂಘಟನೆಗಳ ಕೈವಾಡ ಬಯಲಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.