ಜಿಲ್ಲೆ

ನೇಣು ಬಿಗಿದು ವೃದ್ಧ ಆತ್ಮಹತ್ಯೆ

ಸೌಮ್ಯ ಆರ್

ಪುತ್ತೂರು ಗ್ರಾಮಾಂತರ: ಪತ್ನಿ ಮಕ್ಕಳನ್ನು ತೊರೆದಿದ್ದ ವೃದ್ಧ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪಡಿವನ್ನೂರು ಗ್ರಾಮದ ಮಾಪಲ ಎಂಬಲ್ಲಿ ಶನಿವಾರ ನಡೆದಿದೆ. ಪಡುವನ್ನೂರು ಗ್ರಾಮದ ಕುದ್ಕಾಡಿ ಸಮೀಪದ ಮಾಪಲ ನಿವಾಸಿ ನಾರಾಯಣ ರೈ (75) ಆತ್ಮಹತ್ಯೆ ಮಾಡಿಕೊಂಡವರು. ನಾರಾಯಣ ರೈ ಮಾಪಲದಲ್ಲಿರುವ ತನ್ನ ಸಹೋದರಿಯ ಮನೆಗೆ ಆ.19ರಂದು ಬಂದು ಹಿಂತಿರುಗಿ ಹೋಗಿದ್ದರು. ಶನಿವಾರ ಬೆಳಗ್ಗೆ ಅವರ ಮೃತದೇಹ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸಹೋದರಿಯ ತೋಟದ ಪಕ್ಕದ ಗುಡ್ಡದಲ್ಲಿ ಕಂಡು ಬಂದಿದೆ. ಘಟನೆಗೆ ಸಂಬಂಧಿಸಿ ಮೃತರ ಸಹೋದರಿ ಸುಮತಿ ರೈ ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ.