ಉಪ್ಪಿನಂಗಡಿ : ಅಸ್ವಸ್ಥ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಕೊಣಾಲು ಗ್ರಾಮದ ಚಾಮೇತಮೂಲೆ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ಅಂಬೆಡ್ಕರ್ ಎಂಬುವರ ಪತ್ನಿ ಸೀತಾ(47) ಕ್ಯಾನ್ಸರ್ ಪೀಡಿತೆಯಾಗಿದ್ದು, ನಿರಂತರ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ಇದ್ದ ಕಾರಣ ಮನನೊಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.