ಜಿಲ್ಲೆ

ಕುಡಿತ ಚಟ ಹೊಂದಿದ್ದವ ಆತ್ಮಹತ್ಯೆ

ಸೌಮ್ಯ ಆರ್

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕಟ್ಟದಬೈಲು ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಟ್ಟದ ಬಯಲು ನಿವಾಸಿ ಉಮೇಶ್ ಗುಡಿಗಾರ(42) ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಸಮೀಪವೇ ಇರುವ ಬಾವಿಯ ಅಡ್ಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಉಮೇಶ್ ಮೃತದೇಹ ಪತ್ತೆಯಾಗಿದೆ. ಉಮೇಶ್ ವಿಪರೀತ ಕುಡಿತದ ಚಟ ಹೊಂದಿದ್ದ ಎನ್ನಲಾಗಿದ್ದು ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.