ಜಿಲ್ಲೆ

ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ತಾಲೂಕಿನ ಬಾಲಕುಂಟಹಳ್ಳಿಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮದ ಚಿರುತ್​ ಕುಮಾರ್​ (18) ಮೃತ. ನೇಣು ಹಾಕಿಕೊಳ್ಳುವ ಮೊದಲು ಮಿಸ್​ ಯು ಚಿನ್ನ ಎಂಬ ಬರಹವನ್ನೊಳಗೊಂಡ ಹುಡುಗಿ ಸಹಿತ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದು, ಸಾವಿಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಶಂಕಿಸಲಾಗಿದೆ.ಎಸ್ಸೆಸ್ಸೆಲ್ಸಿಯಲ್ಲಿ ಅನುತ್ತೀರ್ಣಗೊಂಡ ಚಿರುತ್​ ಕೃಷಿ ಕೆಲಸ ಮಾಡಿಕೊಂಡಿದ್ದ. ಶುಕ್ರವಾರ ಜಕ್ಕಲಮಡು ಜಲಾಶಯದ ಬಳಿ ಜಮೀನು ಪಕ್ಕದಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಪ್ರಿಯತಮೆ ಅಪ್ರಾಪ್ತೆಯಾಗಿದ್ದು, ಮದುವೆಯಾಗಲು ನಾನಾ ಅಡ್ಡಿ ಆತಂಕಗಳು ಎದುರಾಗಿದ್ದವು. ಈ ಹಿಂದೆಯೂ ಎರಡು ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಹಾಕಿದ್ದ. ಆಗ ಆತ್ಮೀಯರು ಬುದ್ಧಿ ಹೇಳಿ ಮನವೊಲಿಸಿದ್ದರು ಎನ್ನಲಾಗಿದೆ.