ಜಿಲ್ಲೆ

ನದಿಗೆ ಹಾರಿ ಆತ್ಮಹತ್ಯೆ

ಇಂದಿರಾ ಎನ್ ಕೆ

ಕುಂದಾಪುರ: ಮರವಂತೆ ಗ್ರಾಮದ ನಿವಾಸಿ ಎಂ.ಆರ್.ಶ್ರೀಧರ್ (53) ಎಂಬುವರು ಸೌಪರ್ಣಿಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 15 ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.