ವಿಜಯವಾಣಿ ಸುದ್ದಿಜಾಲ ಧಾರವಾಡ
ವಿಷ ಸೇವಿಸಿ ಅಸ್ಥಸ್ವಗೊಂಡಿದ್ದ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಶಾಂತರಾಮ ಅತ್ಕರ್ (62) ಭಾನುವಾರ ಮೃತಪಟ್ಟಿದ್ದಾರೆ. ಮದ್ಯವ್ಯಸನಿಯಾಗಿದ್ದ ಶಾಂತರಾಮ ಜಿಗುಪ್ಸೆಗೊಂಡು ಮಾ. 23ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.