ಜಿಲ್ಲೆ

ಕೌಟುಂಬಿಕ ಕಲಹದಿಂದ ಬೆಸತ್ತು ಆತ್ಮಹತ್ಯೆ

ವಿಜಯವಾಣಿ ಸುದ್ದಿಜಾಲ ಬಾಗೇಪಲ್ಲಿ

ಕೌಟುಂಬಿಕ ಕಲಹದಿಂದ ಬೇಸತ್ತವ ಭಾನುವಾರ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಲೂಕಿನ ಗೌನಿಪಲ್ಲಿ ಗ್ರಾಮದ ಹರೀಶ್ (37) ಆತ್ಮಹತ್ಯೆ ಮಾಡಿಕೊಂಡವ. ಹರೀಶ್‌ಗೆ ಪತ್ನಿ ಹಾಗೂ ಪುತ್ರ ಇದ್ದು, ಕೌಟುಂಬಿಕ ಕಲಹಕ್ಕೆ ಕಾರಣ ಏನು ? ಎಂಬುದು ತಿಳಿದುಬಂದಿಲ್ಲ. ಬಾಗೇಪಲ್ಲಿ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ವಾರುಸ್ಸುದಾರರಿಗೆ ಮೃತದೇಹ ಹಸ್ತಾಂತರಿಸಲಾಗಿದೆ.