ಜಿಲ್ಲೆ

ಮಾಟಮಂತ್ರಕ್ಕೆ ಹೆದರಿ ಆತ್ಮಹತ್ಯೆ

ಮೈಸೂರು: ನಗರದ ಗೋಕುಲಂ ಬಡಾವಣೆಯಲ್ಲಿ ಮಾಟಮಂತ್ರಕ್ಕೆ ಹೆದರಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಬಡಾವಣೆ ನಿವಾಸಿ ಮುರಳೀಧರ್ ಅವರ ಪುತ್ರ ಮಧುಕರ್(22) ಆತ್ಮಹತ್ಯೆ ಮಾಡಿಕೊಂಡ ಯುವಕ. ಡಿಪ್ಲೊಮಾ ಕೋರ್ಸ್‌ನಲ್ಲಿ ಅನುತ್ತೀರ್ಣಗೊಂಡಿದ್ದ ಈತ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದ. ಬುಧವಾರ ಮನೆಗೆ ಬಂದು ನೋಡಿದಾಗ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.


ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ತಂದೆ ದೂರು ನೀಡಿದ್ದಾರೆ.

ಇದನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ವಿವಿ ಪುರಂ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.