ಸಾಂದರ್ಭಿಕ ಚಿತ್ರ  
ಜಿಲ್ಲೆ

ಮಾನಸಿಕ ಸಮಸ್ಯೆಯಿಂದ ನೊಂದು ಆತ್ಮಹತ್ಯೆ

ಇಂದಿರಾ ಎನ್ ಕೆ

ಗಂಗೊಳ್ಳಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಹರ್ಕೂರು ಗ್ರಾಮದ ಪಾರ್ವತಿ(50) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು 10 ವರ್ಷಗಳಿಂದ ಮಾನಸಿಕ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಭಾನುವಾರ ಬೆಳಗ್ಗೆ ಸೊಪ್ಪು ತರಲು ಹೋಗಿದ್ದ ಪಾರ್ವತಿ ಮನೆಗೆ ವಾಪಸ್ ಬಂದಿರಲಿಲ್ಲ. ಹುಡುಕಾಡಿದಾಗ ಮನೆಯ ಪಕ್ಕದ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.