ಜಿಲ್ಲೆ

ಕಿರುಕುಳಕ್ಕೆ ಮನನೊಂದು ಆತ್ಮಹತ್ಯೆ

ಮರಿದೇವ ಹೂಗಾರ

ಹುಬ್ಬಳ್ಳಿ: ಪತ್ನಿ, ಅತ್ತೆ-ಮಾವ ಕಿರುಕುಳದಿಂದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ.

ಫಕ್ಕಿರೇಶ ಗುರುಸಿದ್ದಪ್ಪ ರೋಗನ್ನವರ (40) ಆತ್ಮಹತ್ಯೆ ಮಾಡಿಕೊಂಡವರು. ಚಾಲಕನಾಗಿದ್ದ ಫಕ್ಕಿರೇಶಗೆ ನಿತ್ಯವೂ ಪತ್ನಿ ಮನೆ ಕಡೆಯುವರು ಮಾನಸಿಕ ಕಿರುಕುಳ ಕೊಡುತ್ತಿದ್ದರು. ಈ ಬಗ್ಗೆ ಅನೇಕ ಬಾರಿ ಜಗಳ, ಸಂಧಾನಗಳಾಗಿವೆ. ಇದರಿಂದ ಮನನೊಂದಿದ್ದ ಫಕ್ಕಿರೇಶ, ಆತ್ಮಹತ್ಯೆ ಮಾಡಿಕೊಂಡಿದ್ದರ ಕುರಿತು ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.