ಜಿಲ್ಲೆ

ಆತ್ಮಹತ್ಯೆ ವೈಯಕ್ತಿಕವಾಗಿ ಮೊಡಿಕೊಳ್ಳುವ ಅಪರಾಧ

ರಾಚಯ್ಯ ಸ್ವಾಮಿ

ರಾಯಚೂರು: ಆತ್ಮಹತ್ಯೆ ಎನ್ನುವುದು ವೈಯಕ್ತಿಕವಾಗಿ ಮಾಡಿಕೊಳ್ಳುವ ದೊಡ್ಡ ಅಪರಾಧವಾಗಿದ್ದು, ವ್ಯಕ್ತಿ ಯಾವುದೇ ಸಮಸ್ಯೆಯಿದ್ದರೂ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕೆ ಹೊರತು ಆತ್ಮಹತ್ಯೆಯಂತಹ ನಿರ್ಧಾರಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ದಯಾನಂದ ಬೇಲೂರೆ ಹೇಳಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದಿಂದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ನಿಮಿತ್ತ ಸೋಮವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿರುವ ವ್ಯಕ್ತಿಯ ಮಾಹಿತಿಯಿದ್ದಲ್ಲಿ ಅವರಿಗೆ ಆತ್ಮಸ್ಥೆರ್ಯ ತುಂಬುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಜೀವನದಲ್ಲಿ ಹಲವು ಒತ್ತಡ ಹಾಗೂ ಮಾನಸಿಕ ಖಿನ್ನತೆಯಿಂದಾಗಿ ಸಾಕಷ್ಟು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳದಂತೆ ತಿಳುವಳಿಕೆ ಮತ್ತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ದಯಾನಂದ ಬೇಲೂರೆ ಹೇಳಿದರು.
ಡಿಎಚ್‌ಒ ಡಾ.ಸುರೇಂದ್ರಬಾಬು ಮಾತನಾಡಿ, ವ್ಯಕ್ತಿ ಜೀವನದಲ್ಲಿ ಬೇಸತ್ತು ಆತ್ಮಹತ್ಯೆಗೆ ಮುಂದಾಗುತ್ತಾನೆ. ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ. ಪ್ರತಿ ವರ್ಷ ವಿಶ್ವದಲ್ಲಿ 8 ರಿಂದ 10 ಲಕ್ಷ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಪ್ರತಿ 40 ಸೆಕೆಂಡಿಗೆ ಒಬ್ಬರು ಆತ್ಮಹತ್ಯೆಗೆ ಮುಂದಾಗುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಕಾರಿ ಡಾ.ಮಹ್ಮದ್ ಶಾಕೀರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಕಾರಿ ಡಾ.ಎನ್.ಯಶೋಧ, ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ಗಣೇಶ, ಮಾನಸಿಕ ರೋಗ ತಜ್ಞ ಡಾ.ಮನೋಹರ್ ಪತ್ತಾರ, ಡಾ.ಅನಿಲ್ ಗುಮಾಸ್ತೆ, ಡಾ.ಪವನಕುಮಾರ ಉಪಸ್ಥಿತರಿದ್ದರು.