ಜಿಲ್ಲೆ

ಸುಜಯಾ ಬಿಜೆಪಿ ಜಿಲ್ಲಾ ಕಾರ್ಯದರ್ಶಿ

Shivamogga - Desk - Vinayakumar D B

ಕಳಸ: ಸುಜಯಾ ಸದಾನಂದ ಅವರು ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ಸುಜಯಾ ಅವರು ಬಿಜೆಪಿ ಬೆಂಬಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡು ಬಾರಿ ಕಳಸ ಗ್ರಾಪಂ ಸದಸ್ಯರಾಗಿ ಆಯ್ಕೆಗೊಂಡಿದ್ದರು. ಎರಡೂವರೆ ವರ್ಷ ಅಧ್ಯಕ್ಷೆಯಾಗಿಯೂ ಸೇವೆ ಸಲ್ಲಿಸಿದ್ದರು. ಕಳಸ ಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಮತ್ತು ಮೂಡಿಗೆರೆ ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ರಾಜಕೀಯ ಹೊರತಾಗಿ ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಸಜುಯಾ ಪ್ರಸ್ತುತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಮಗಳೂರು ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯೆ, ಕಳಸ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿ ಅಧ್ಯಕ್ಷೆ, ತಾಲೂಕು ಸಾಹಿತ್ಯ ಪರಿಷತ್‌ನ ಕಾರ್ಯದರ್ಶಿ, ಕನ್ನಡ ಜಾನಪದ ಪರಿಷತ್‌ನ ಜಿಲ್ಲಾ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಬಾರಿ ಕಳಸ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸ್ಥಾನಕ್ಕೆ ಸುಜಯಾ ಹೆಸರು ಕೇಳಿ ಬರುತ್ತಿದ್ದ ಸಂದರ್ಭದಲ್ಲಿ, ಇದೀಗ ಅಚ್ಚರಿಯೆಂಬಂತೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಅಯ್ಕೆಯಾಗಿದ್ದಾರೆ.