ಜಿಲ್ಲೆ

ಸುಳ್ಯೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ

ಸೌಮ್ಯ ಆರ್

ಸುಳ್ಯ: ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮ ಸುಳ್ಯೋತ್ಸವ ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿದರು.

ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ, ಕೆ.ವಿ.ಜಿ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ, ಪ್ರಮುಖರಾದ ಜಯಪ್ರಕಾಶ್ ರೈ ಸುಳ್ಯ, ಸುಧಾಕರ ಕಾಮತ್ ಅಡ್ಕಾರು, ಯುವ ಉದ್ಯಮಿ ಸನತ್ ಆಗ್ರೋ, ಸುರೇಶ್ ಶೆಟ್ಟಿ ಪುತ್ತೂರು, ಹೇಮಂತ್ ಸಂಪಾಜೆ ಮತ್ತಿತರರು ಉಪಸ್ಥಿತರಿದ್ದರು.