ಸುಳ್ಯ: ಕನ್ನಡದ ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸಿದಾಗ ಕನ್ನಡದ ಚಿಂತನೆಗಳು ಹಾಗೂ ಭಾಷಾ ಸಂಸ್ಕೃತಿ ಬೆಳೆಯಲು ಸಾಧ್ಯ ಎಂದು ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಧನಂಜಯ ಕುಂಬ್ಳೆ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಘಟಕದ ವತಿಯಿಂದ ಅರಂತೋಡಿನ ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಭಾಷಣ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಸಜ್ಜನ ಪ್ರತಿಷ್ಠಾನದ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ, ಸಮ್ಮೇಳನಾಧ್ಯಕ್ಷೆ ಲೀಲಾ ದಾಮೋದರ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ಸುಳ್ಯ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಕಿರ್ಲಾಯ, ಅಬ್ದುಲ್ಲಾ ಅರಂತೋಡು, ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಅರಂತೋಡು ಗ್ರಾಪಂ ಅಧ್ಯಕ್ಷ ಕೇಶವ ಅಡ್ತಲೆ, ಸಲಹಾ ಸಮಿತಿ ಸದಸ್ಯ ರಾಮಚಂದ್ರ ಪಲ್ಲತ್ತಡ್ಕ, ಚಂದ್ರಾವತಿ ಬಡ್ಡಡ್ಕ ಉಪಸ್ಥಿತರಿದ್ದರು.
ಬಾಬು ಗೌಡ ಅಚ್ರಪ್ಪಾಡಿ ಸ್ವಾಗತಿಸಿದರು. ಕಿಶೋರ್ ಕುಮಾರ್ ಕಿರ್ಲಾಯ ವಂದಿಸಿದರು. ಚಂದ್ರಮತಿ ಕೆ. ಕಾರ್ಯಕ್ರಮ ನಿರೂಪಿಸಿದರು.
ಕನ್ನಡ ಕಸ್ತೂರಿ ಸನ್ಮಾನ
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸುಳ್ಯ ತಾಲೂಕಿನ ಹನ್ನೊಂದು ಮಂದಿ ಸಾಧಕರಿಗೆ ಕನ್ನಡ ಕಸ್ತೂರಿ ಸನ್ಮಾನ ನೀಡಿ ಪುರಸ್ಕರಿಸಲಾಯಿತು.
ಡಾ.ಶ್ವೇತಾ ಮಡಪ್ಪಾಡಿ, ಕುಮಾರಸ್ವಾಮಿ ತೆಕ್ಕುಂಜ, ಗಣೇಶ್ ಭಟ್, ಡಾ.ಲೀಲಾಧರ್ ಡಿ.ವಿ, ಸಲೀಂ ಸುಳ್ಯ, ತೇಜೇಶ್ವರ ಕುಂದಲ್ಪಾಡಿ, ಹುಕ್ರಪ್ಪ ಉಳುವಾರು, ಸರಸ್ವತಿ ಚಿದಾನಂದ ಅಡ್ತಲೆ, ಕೆ.ಆರ್.ಪದ್ಮನಾಭ, ಆನಂದ ಕಲ್ಲುಗದ್ದೆ, ಕೇಶವ ಪರವ ಅವರನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಗೌರವಿಸಿದರು.