ಜಿಲ್ಲೆ

ಸುಮಲತಾ ಶೀಘ್ರ ಬಿಜೆಪಿ ಸೇರುತ್ತಾರೆ!

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಶಾಸಕ ಸಿ.ಎಸ್. ಪುಟ್ಟರಾಜು ಹೇಳಿದರು.


ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾಗಲು ಸುಮಲತಾ ಅಂಬರೀಶ್ ಪ್ಲಾೃನ್ ಮಾಡಿದ್ದರು. ಆದರೆ, ಸರ್ಕಾರಿ ಕಾರ್ಯಕ್ರಮವಾದ ಕಾರಣ ಅದಕ್ಕೆ ಅವಕಾಶ ಸಿಗಲಿಲ್ಲ. ನನಗೆ ಇರುವ ಮಾಹಿತಿ ಪ್ರಕಾರ ಇನ್ನೂ ಬೇಗ ಬಿಜೆಪಿ ಸೇರಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಯಾರೇ ಬಂದರೂ ಮಂಡ್ಯದಲ್ಲಿ ಜೆಡಿಎಸ್ ಪ್ರಾಬಲ್ಯ ಕುಗ್ಗುವುದಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಬೇರೆಯವರ ಆಟ ನಡೆಯಲ್ಲ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.