ಕೆ.ಆರ್.ಪೇಟೆ: ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಮಕ್ಕಳ ಬೇಸಿಗೆ ಶಿಬಿರಗಳು ವರದಾನವಾಗಿವೆ ಎಂದು ಆರ್.ಟಿ.ಒ.ಮಲ್ಲಿಕಾರ್ಜುನ ಹೇಳಿದರು.
ಹೇಮಗಿರಿಯ ಬಿಜಿಎಸ್ ಪಬ್ಲಿಕ್ ಶಾಲೆ ಆವರಣದಲ್ಲಿ ಶಾಲಾ ಮಕ್ಕಳಿಗೆ ಆಯೋಜಿಸಿದ್ದ 15ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಕ್ಕಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ನೀಲಕಂಠ, ಗ್ರಾಪಂ ಸದಸ್ಯ ಅಗ್ರಹಾರಬಾಚಹಳ್ಳಿ ಶ್ರೀನಿವಾಸ, ಕಿಕ್ಕೇರಿ ವಿಭಾಗದ ಗೃಹರಕ್ಷಕದಳ ಘಟಕಾಧಿಕಾರಿ ಜಿ.ಪಿ.ರಾಜು, ರಂಗನಾಥ, ಆನಂದ್ ಭಾಗವಹಿಸಿದ್ದರು.