ಕಾರ್ಕಳ: ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ನಿನ್ನೆ ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದ್ದು, ಜತೆಗೆ ಬೆಳೆ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿರುತ್ತದೆ.
ಕಾರ್ಕಳ ತಾಲೂಕಿನ ಬೆಳ್ಮಣ್, ಸೂಡ, ನಂದಳಿಕೆ, ರೆಂಜಾಳ, ಬೈಲೂರು, ಕಡ್ತಲ ಹಾಗೂ ಯರ್ಲಪಾಡಿ ಗ್ರಾಮಗಳ ಪರಿಸರದಲ್ಲಿ ಮತ್ತು ಹೆಬ್ರಿ ತಾಲೂಕಿನ ಚಾರ, ಕುಚ್ಚೂರು ಮತ್ತು ಮುದ್ರಾಡಿ ಗ್ರಾಮಗಳ ಪರಿಸರದಲ್ಲಿ ನಿನ್ನೆಯ ಸಂಜೆಯ ಹೊತ್ತಿಗೆ ಒಮ್ಮೆಲೆ ಬಂದ ಸುಂಟರಗಾಳಿ ಹಾಗೂ ಅತಿಯಾದ ಮಳೆ ಗಾಳಿಯಿಂದ ಆ ಪ್ರದೇಶದ ಹಲವು ಕಡೆಗಳಲ್ಲಿ ವಾಸದ ಮನೆಗಳು, ಕಷಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿದ್ದು, ತುರ್ತು ಪರಿಹಾರ ಒದಗಿಸುವಂತೆ ಶಾಸಕ ಸುನಿಲ್ ಕುಮಾರ್ ಅವರು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಭೇಟಿ ಮನವಿ ಮಾಡಿದ್ದಾರೆ.