ಚಿಕ್ಕಮಗಳೂರು: ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕ ಸದೃಢಗೊಳ್ಳಬೇಕೆಂಬ ದೃಷ್ಠಿಯಿಂದ ಪೌಷ್ಟಿಕ ಆಹಾರ ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.
ನಗರದ ಬಸವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಜಿಪಂ, ತಾಪಂ, ಜಿಲ್ಲಾಡಳಿತ, ಶಾಲಾಶಿಕ್ಷಣ ಇಲಾಖೆ, ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್-ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಮ್ ಪ್ರೇಮ್ ಜಿ ಪೌಂಡೇಷನ್ ಬೆಂಗಳೂರು ಸಹಯೋಗದಲ್ಲಿ ೨೦೨೪-೨೫ನೇ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ೬ ದಿನಗಳು ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಪೌಷ್ಠಿಕತೆ ಹೆಚ್ಚಿಸುವ ದೃಷ್ಟಿಯಿಂದ ಪೌಷ್ಠಿಕ ಪೂರಕ ಆಹಾರ ನೀಡಲು ಯೋಜನೆ ರೂಪಿಸಿದೆ. ಇದರ ಭಾಗವಾಗಿ ಅಜೀಮ್ ಪ್ರೇಂ ಜಿ ಪೌಂಡೇಷನ್ ತನ್ನ ದುಡಿಮೆಯನ್ನು ಸ್ವಂತಕ್ಕೆ ಬಳಸದೆ ಸಾರ್ವಜನಿಕ ಸೇವೆಗೆ ಬಳಸಲು ಮುಂದಾಗಿ ಮೊದಲನೇ ಸ್ಥಾನದಲ್ಲಿದೆ ಎಂದು ಶ್ಲಾಘಿಸಿದರು.
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ನಾಲ್ಕು ದಿನ ಹಾಲು ನೀಡಲು ಮುಂದಾಗಿರುವುದರಿAದ ಮಕ್ಕಳಲ್ಲಿ ಪೌಷ್ಠಿಕ ಆಹಾರದಿಂದ ಭೌತಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ೧೨,೫೦೦ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ನೀಗಿಸಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿz್ದೆÃವೆಂಬ ಕೀಳರಿಮೆ ಬೇಡ. ಸರ್ಕಾರಿ ಶಾಲೆಯಲ್ಲಿ ಓದಿದವರು ದೊಡ್ಡ ದೊಡ್ಡ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆಗೆ ಮಕ್ಕಳು ಕಡಿಮೆಯಾಗುತ್ತಿರುವುದನ್ನು ಪರಿಗಣಿಸಿ ದಾಖಲಾತಿ ಹೆಚ್ಚಿಸಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.
ಶಾಸಕಾAಗ, ಕಾರ್ಯಾಂಗ ಒಟ್ಟಿಗೆ ಸಮರ್ಪಕವಾಗಿ ಸೇವೆ ಸಲ್ಲಿಸಿದಾಗ ಮಾತ್ರ ಸರ್ಕಾರದ ಸೌಲಭ್ಯಗಳು ಬಡವರನ್ನು ತಲುಪಲು ಸಾಧ್ಯವಾಗುತ್ತದೆ. ನಗರದ ಬಸವನಹಳ್ಳಿ ಬಾಲಕೀಯರ ಕಾಲೇಜು ಹಾಗೂ ಜೂನಿಯರ್ ಕಾಲೇಜು ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಕರ್ತವ್ಯ ನಿರ್ವಹಿಸುತ್ತಿದೆ. ಈ ಕಾಲೇಜುಗಳಿಗೆ ಬೇಕಾದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.
ಜಿಪಂ ಸಿಇಒ ಎಚ್.ಎಸ್ ಕೀರ್ತನಾ ಮಾತನಾಡಿ, ವಿದ್ಯಭ್ಯಾಸದ ಅವಧಿಯಲ್ಲಿ ಹೆಣ್ಣು ಮಕ್ಕಳು ಪರಿಶ್ರಮದಿಂದ ಶಿಕ್ಷಣವನ್ನು ಪಡೆದು ಮುಂದೆ ದೊಡ್ಡ ಸಾಧನೆ ಮಾಡುವ ಮೂಲಕ ಹಲವು ಮಹಿಳೆಯರಿಗೆ ಉದ್ಯೋಗ ನೀಡಿ ಆಶ್ರಯ ಒದಗಿಸುವಂತೆ ಕರೆನೀಡಿದರು.
ಬಡ ಕುಟುಂಬದ ವಿದ್ಯಾರ್ಥಿಗಳು ಹಸಿವಿನಿಂದ ಬಳಲಬಾರದು ಎಂಬ ದೃಷ್ಟಿಯಿಂದ ಸರ್ಕಾರ ಪೂರಕ ಪೌಷ್ಠಿಕ ಆಹಾರ ನೀಡಿ ಪೌಷ್ಠಿಕಾಂಶಗಳ ಕೊರತೆಯನ್ನು ನೀಗಿಸಲು ಮುಂದಾಗಿದೆ. ಶಿಕ್ಷಕರು ಉತ್ತಮ ಗುಣಮಟ್ಟದ ಪೌಷ್ಠಿಕ ಆಹಾರವನ್ನು ನೀಡಲು ಮುಂದಾಗಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿಗೆ ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಗೌರವ ಸಂಪಾದಿಸಿಕೊಳ್ಳಬೇಕು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಒಬ್ಬರಾದರೂ ರಾಜ್ಯಮಟ್ಟದಲ್ಲಿ ಮೊದಲಿಗರಾಗಬೇಕು ಎಂದು ಕಿವಿಮಾತು ಹೇಳಿದರು.
ಮಧ್ಯಾಹ್ನ ಉಪಹಾರ ಯೋಜನೆಯ ಶಿಕ್ಷಣಾಧಿಕಾರಿ ವೈ.ಬಿ.ಸುಂದರೇಶ್ ಮಾತನಾಡಿ, ಸದೃಢ ದೇಹದಲ್ಲಿ ಸದೃಢ ಮನಸ್ಸಿದೆ. ಅದೇ ರೀತಿಯಲ್ಲಿ ಇಂದಿನ ಪ್ರಜೆಗಳೇ ಮುಂದಿನ ಪ್ರಭುಗಳು. ಭವಿಷ್ಯದ ಪ್ರಜೆಗಳು ಶಾಲಾ ಕೊಠಡಿಗಳಲ್ಲಿ ಅರಳುತ್ತವೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಒಂದು ಸುಸಂಸ್ಕೃತ ಸಮಾಜದಲ್ಲಿ ವಿದ್ಯಾರ್ಜನೆಗೆ ಬಹಳ ಮಹತ್ವವನ್ನು ನೀಡಲಾಗುತ್ತದೆ ಎಂದರು.
ಪ್ರಧಾನ ಮಂತ್ರಿ ಶಕ್ತಿ ನಿರ್ಮಾಣ್ ಯೋಜನೆಯಡಿ ಮಧ್ಯಾಹ್ನದ ಬಿಸಿ ಊಟ ವಿತರಣೆಯ ಜೊತೆಗೆ ಪೂರಕ ಪೌಷ್ಠಿಕ ಆಹಾರ ವಿತರಣೆಯನ್ನು ಸರ್ಕಾರ, ಸಾರ್ವಜನಿಕರು ಸೇರಿದಂತೆ ಅನೇಕ ಸಂಸ್ಥೆಗಳು ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ ಎಂದರು.
ವಾರದಲ್ಲಿ ೫ ದಿನ ಹಾಲು ವಿತರಣೆ ಹಾಗೂ ೨ ದಿನ ಮೊಟ್ಟೆ ವಿತರಣೆ ಮಾಡಿಕೊಂಡು ಬರಲಾಗಿದ್ದು, ಮುಂದಿನ ದಿನಗಳಲ್ಲಿ ವಾರದಲ್ಲಿ ೨ ದಿನಗಳ ಬದಲಾಗಿ ೪ ದಿನಗಳು ಮೊಟ್ಟೆ ವಿತರಣೆಗೆ ಚಾಲನೆ ನೀಡಲಾಗುತ್ತಿದೆ ಎಂದು ಹೇಳಿದರು
ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಅನುಮಧುಕರ್, ನಗರಸಭೆ ಮಾಜಿ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಆಡಳಿತ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟರಾಜು, ಪ್ರಾಚಾರ್ಯೆ ಸುನಿತಾ, ಎಸ್‌ಡಿಎಂಸಿ ಅಧ್ಯಕ್ಷೆ ದಿವ್ಯಾಕುಮಾರಿ, ತಾಪಂ ಇಒ ಎಚ್.ಕೆ.ತಾರನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೈರೇಗೌಡ, ಚಂದ್ರಯ್ಯ, ಕಿರಣ್‌ಕುಮಾರ್, ಪರಮೇಶ್, ಗಂಗಾಧರ್, ಮಂಜುನಾಥ್, ಶ್ರೀನಿವಾಸ್, ಶಿಕ್ಷಣ ಸಂಯೋಜಕರಾದ ಟಿ.ಜಿ.ಅರಸು, ವೀರೇಶ್‌ಕೌಲಗಿ ಮತ್ತಿತರರಿದ್ದರು.