ಎನ್.ಆರ್.ಪುರದಲ್ಲಿ ಪದವೀಧರ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಡಾ. ಧನಂಜಯಸರ್ಜಿ ಪರ ಸಹೋದರ ಹರ್ಷ ಸರ್ಜಿ ಮತಯಾಚನೆ ಮಾಡಿದರು. ಚಂದ್ರಶೇಖರ್, ಹೊಸೂರು ಸುರೇಶ್, ಬಿ.ಎಸ್.ಆಶೀಶ್‌ಕುಮಾರ್, ಎನ್.ಎಂ.ಕಾಂತರಾಜ್ ಇತರರಿದ್ದರು. 
ಜಿಲ್ಲೆ

ಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ

ಎಸ್.ಎನ್.ರವೀಂದ್ರ

ಎನ್.ಆರ್.ಪುರ: ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿಗಳಾದ ಡಾ. ಧನಂಜಯ ಸರ್ಜಿ ಹಾಗೂ ಎಸ್.ಎಲ್.ಬೋಜೇಗೌಡ ಅವರನ್ನು ಬೆಂಬಲಿಸಬೇಕು ಎಂದು ಧನಂಜಯ ಸರ್ಜಿ ಸಹೋದರ ಹರ್ಷ ಸರ್ಜಿ ಮನವಿ ಮಾಡಿದರು.

ಬುಧವಾರ ಪಟ್ಟಣದಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿ ಮಾತನಾಡಿ, ಡಾ. ಧನಂಜಯ ಸರ್ಜಿ ಅವರಿಗೆ ಪವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಸಾಮರ್ಥ್ಯವಿದೆ. ಎಸ್.ಎಲ್.ಬೋಜೇಗೌಡ ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿ ಸೇವೆ ಸಲ್ಲಿಸುತ್ತಾರೆ. ಇಬ್ಬರೂ ಅಭ್ಯರ್ಥಿಗಳಿಗೆ ಮತ ನೀಡಿ ಎಂದು ಕೋರಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಸುರಭಿರಾಜೇಂದ್ರ, ತಾಲೂಕು ವಕ್ತಾರ ಎನ್.ಎಂ.ಕಾಂತರಾಜ್, ಮುಖಂಡರಾದ ಹೊಸೂರು ಸುರೇಶ್, ಚಂದ್ರಶೇಖರ್, ಬಿ.ಎಸ್.ಆಶೀಶ್‌ಕುಮಾರ್, ಎಸ್.ಎಸ್.ಸಂತೋಷ್‌ಕುಮಾರ್, ವೈ.ಎಸ್.ರವಿ, ಭದ್ರೇಗೌಡ, ಮಂಜುನಾಥ್ ಲಾಡ್ ಇದ್ದರು.