ಜಿಲ್ಲೆ

ಬಹುಜನ ಸಮಾಜ ಪಕ್ಷಕ್ಕೆ ಬೆಂಬಲ ನೀಡಿ

reportermys

ಮಡಿಕೇರಿ: ಜಿಲ್ಲೆಯಲ್ಲಿ ಬಹುಜನ ಸಮಾಜ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಆರಂಭಗೊಂಡಿದ್ದು, ಪಕ್ಷದ ಕಾರ್ಯಕರ್ತರು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದುಕೊಳ್ಳುವ ಮೂಲಕ ಪಕ್ಷಕ್ಕೆ ಬೆಂಬಲ ನೀಡುವಂತೆ ಪಕ್ಷದ ಜಿಲ್ಲಾ ಉಸ್ತುವಾರಿ ಜಯಪ್ಪ ಹಾನಗಲ್ ಮನವಿ ಮಾಡಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಅವರು, ಮುಂಬರು ವಿಧಾನ ಸಭಾ ಚುನಾವಣೆ ಹಿನ್ನೆಲೆ ಬಹುಜನ ಸಮಾಜ ಪಕ್ಷ ಈ ಬಾರಿ ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಈ ಹಿನ್ನೆಲೆ ಪಕ್ಷದ ಸದಸ್ಯತ್ವ ನೋಂದಣಿ ಆರಂಭಿಸಿದ್ದು, ಜಿಲ್ಲೆಯ ಜನತೆ ೨೦೦ ರೂ ಪಾವತಿಸಿ ಸದಸ್ಯತ್ವ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ ಅವರು, ಮಡಿಕೇರಿ, ಕುಶಾಲನಗರ, ಸೋಮವಾರಪೇಟೆ ತಾಲೂಕು ಘಟಕ ಅಸ್ವಿತ್ವಕ್ಕೆ ಬಂದಿದ್ದು, ವಿರಾಜಪೇಟೆ ಮತ್ತು ಪೊನ್ನಂಪೇಟೆ ಘಟಕ ರಚನೆಯಾಗಬೇಕಿದೆ ತಿಳಿಸಿದರು.


ಜಿಲ್ಲಾ ಸಮಿತಿಗೆ ಯಾವುದೇ ಅರ್ಜಿ ಬಂದಿಲ್ಲ. ಪಕ್ಷದ ಸದಸ್ಯರಲ್ಲಿ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿಯುಳ್ಳವರು ಅರ್ಜಿ ಸಲ್ಲಿಸಿದಲ್ಲಿ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಸಮಿತಿಗೆ ಕಳುಹಿಸಲಾಗುತ್ತದೆ. ರಾಜ್ಯ ಸಮಿತಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ ಎಂದು ತಿಳಿಸಿದರು.


ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿದ್ದರೂ ನಿವೇಶನ, ಮೂಲಭೂತ ಸೌಕರ್ಯಗಳಿಗೆ ಹೋರಾಟ ಮಾಡಬೇಕಾದ ದುಸ್ಥಿತಿ ನಿರ್ಮಾಣವಾಗಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಹಲವಾರು ಸಂಘಟನೆಗಳು ಪ್ರತಿಭಟಿಸಿದರೂ ಸ್ಪಂದನೆ ಸಿಗುತ್ತಿಲ್ಲ. ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುವಂತೆ ಆಗ್ರಹಿಸಿದರು.


ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದಪ್ಪ, ಜಿಲ್ಲಾ ಸಂಯೋಜಕ ಮಹಮ್ಮದ್ ಕುಂಞಿ, ಉಪಾಧ್ಯಕ್ಷರಾದ ಎಚ್.ಬಿ.ಬೆಳ್ಳಿಯಪ್ಪ, ಬಿ.ಡಿ.ಸರೋಜ, ಸದಸ್ಯ ಎಚ್.ಎ.ಪಾಪಣ್ಣ ಉಪಸ್ಥಿತರಿದ್ದರು.