ಹಿರಿಯ ಪತ್ರಕರ್ತ ದಿ. ಗುರುವಪ್ಪ ಎನ್.ಟಿ. ಬಾಳೆಪುಣಿಯವರ ಸ್ಮರಣಾರ್ಥ ದತ್ತಿನಿಧಿ ಪ್ರತಿಭಾ ಪುರಸ್ಕಾರ ವಿತರಣೆ ಹಸ್ತಾಂತರ ಕಾರ್ಯಕ್ರಮ ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ನಡೆಯಿತು. ಪ್ರಶಾಂತ್, ರಾಧಾಕೃಷ್ಣ ರೈ, ಶೀನಾ ಶೆಟ್ಟಿ, ಖಾದರ್ ಶಾ, ಪಿ.ಬಿ. ಹರೀಶ್ ರೈ ಇದ್ದರು. 
ಜಿಲ್ಲೆ

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ಶ್ಲಾಘನೀಯ

Chethan padubidri

ಪ್ರಮುಖ ಮುಖ್ಯಾಂಶಗಳು

  • ನರಿಂಗಾನ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್
  • ಪತ್ರಕರ್ತ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಸ್ಮರಣೆ
ಮಂಗಳೂರು: ಅರ್ಹ ವಿದ್ಯಾರ್ಥಿಗಳನ್ನೇ ಆಯ್ಕೆ ಮಾಡಿ ಸಹಾಯಧನ ನೀಡುವ ಒಳ್ಳೆಯ ಕೆಲಸ ಮಾಡಲಾಗಿದೆ. ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೆಪುಣಿ ಅವರು ಶಾಲಾ ದಿನಗಳಿಂದಲೇ ನಾಯಕತ್ವದ ಗುಣವನ್ನು ಹೊಂದಿದವರಾಗಿದ್ದರು. ಸಾಮಾಜಿಕವಾಗಿಯೂ ಕೆಲಸ ಮಾಡಿದ್ದರು. ಅವರ ಹೆಸರಿನಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ನರಿಂಗಾನ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಅವರು ಹೇಳಿದರು.
ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಶುಕ್ರವಾರ ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಹಿರಿಯ ಪತ್ರಕರ್ತ ದಿ. ಗುರುವಪ್ಪ ಎನ್.ಟಿ. ಬಾಳೆಪುಣಿಯವರ ಸ್ಮರಣಾರ್ಥ ದತ್ತಿನಿಧಿ ಪ್ರತಿಭಾ ಪುರಸ್ಕಾರ ವಿತರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯಮಿ ಉಮಿಯ ರಾಧಾಕೃಷ್ಣ ರೈ ಮಾತನಾಡಿ, ಅಕ್ಷರ ಸಂತ ಹರೇಕಳ ಹಾಜಬ್ಬರನ್ನು ಮೊದಲ ಬಾರಿಗೆ ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಬಾಳೆಪುಣಿಯವರದ್ದು. ಅವರ ಹೆಸರಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯ ಹೆಮ್ಮೆಯ ಸಂಗತಿ ಎಂದರು.
ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅವರು ಬಾಳೆಪುಣಿಯವರೊಂದಿಗಿನ ಒಡನಾಟದ ನೆನಪುಗಳನ್ನು ಹಂಚಿಕೊಂಡರು.
ವಾರ್ತಾಧಿಕಾರಿ ಖಾದರ್ ಶಾ, ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಲೋಕೇಶ್ ಭಂಡಾರಿ, ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ, ಕರಾವಳಿ ಕುರುಬರ ಸಂಘದ ಅಧ್ಯಕ್ಷ ನಿರಂಜನ್ ಎಲ್.ಆರ್. ಗಾಂಧಿನಗರ್, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಶೆಟ್ಟಿ ಪಂಜಿಮೊಗರು, ಟ್ರಸ್ಟಿಗಳಾದ ಪ್ರಶಾಂತ್ ಅಬ್ಬೆಟ್ಟು, ದಿನೇಶ್ ನಾಯ್ಕ್ ಕಾಶಿಪಟ್ಣ, ಬಾಳೆಪುಣಿ ಅವರ ಪತ್ನಿ ಜಯಂತಿ ಬಾಳೆಪುಣಿ, ಪುತ್ರ ಮನೀಶ್ ಬಾಳೆಪುಣಿ ಉಪಸ್ಥಿತರಿದ್ದರು.
ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮೋಹನ್‌ದಾಸ್ ಮರಕಡ ಪ್ರಸ್ತಾವನೆಗೈದರು. ಪತ್ರಕರ್ತ ಅನ್ಸಾರ್ ಇನೋಳಿ ಸ್ವಾಗತಿಸಿದರು. ಮಾನಸ ವಂದಿಸಿದರು. ಬಬಿತಾ ಎಂ. ಮರಕಡ ಕಾರ್ಯಕ್ರಮ ನಿರೂಪಿಸಿದರು.

ಎಂಟು ವಿದ್ಯಾರ್ಥಿಗಳಿಗೆ ಸಹಾಯಧನ

ಟ್ರಸ್ಟ್ ವತಿಯಿಂದ ಒಟ್ಟು 8 ಮಂದಿಗೆ 1.50 ಲಕ್ಷ ರೂ. ಮೊತ್ತದ ದತ್ತಿನಿಧಿ ಸಹಾಯ ನೀಡಲಾಗಿದೆ. ಮಂಗಳೂರಿನ ತ್ರಿಶಾ ಕಾಲೇಜಿನ ಧೃತಿ ಕುಂಜತ್ತಬೈಲ್, ಕೆನರಾ ಕಾಲೇಜಿನ ಮೇಘಾ ಸಜಿಪ, ಸಂತ ಅಲೋಶಿಯಸ್ ಪದವಿ ಕಾಲೇಜಿನ ಬಿಸಿಎ ವಿದ್ಯಾರ್ಥಿನಿ ತ್ರಿಶಾ ಪಚ್ಚನಾಡಿ, ಕೆನರಾ ಕಾಲೇಜಿನ ಶ್ರೀಜಾ ಶೆಟ್ಟಿ, ಬಿ.ಸಿ. ರೋಡಿನ ಶೋಭಿತಾ, ದಡ್ಡಲಕಾಡು ಶಾಲೆಯ ಪ್ರಾಪ್ತಿ, ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ಶ್ರೇಯಾ ಮತ್ತು ವಾಮದಪದವು ಸರ್ಕಾರಿ ಪದವಿಪೂರ್ವ ಕಾಲೇಜಿನ ರಶ್ಮಿತ್ ಅವರಿಗೆ ಈ ವರ್ಷದ ಪ್ರತಿಭಾ ಪುರಸ್ಕಾರ- ಸಹಾಯಧನದ ನೆರವು ವಿತರಿಸಲಾಯಿತು.