ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ವಿಜಯಪುರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ನಡೆಯುತ್ತಿರವ ಪಾಲಿಕೆ ನೌಕರರ ಮುಷ್ಕರ ಸ್ಥಳಕ್ಕೆ ಸತ್ಯಶೋಧಕ ಡಾ. ಅಣ್ಣಾಭಾವು ಸಾಠೆ ಸಂಟನಾ ಸಮಿತಿ ಪದಾಧಿಕಾರಿಗಳು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. 
ಜಿಲ್ಲೆ

ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಗಳ ಪರಿಷತ್ತು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬೆಂಬಲ

ವಿಜಯಪುರ : ವಿವಿಧ ಬೇಡಿಕೆಗಳಿಗೆ ಈಡೇರಿಸಲು ಒತ್ತಾಯಿಸಿ ಇಲ್ಲಿನ ಜಲನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಮಹಾನಗರ ಪಾಲಿಕೆ ನೌಕರರ ಸಂಗಳ ಪರಿಷತ್​ ವತಿಯಿಂದ ಹಮ್ಮಿಕೊಂಡಿರುವ ಮುಷ್ಕರಕ್ಕೆ ಗುರುವಾರ ಸತ್ಯಶೋಧಕ ಡಾ. ಅಣ್ಣಾಭಾವು ಸಾಠೆ ಸಂಟನಾ ಸಮಿತಿಯ ಪದಾಧಿಕಾರಿಗಳು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ರಾಜ್ಯದ 10 ಮಹಾನಗರ ಪಾಲಿಕೆಗಳ ಅಧಿಕಾರಿಗಳು ಹಾಗೂ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನಗರಾಭಿವೃದ್ಧಿ ಸಚಿವರು ಹಾಗೂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ.

ಜು. 8 ರಿಂದ ಅರ್ನಿದಿಷ್ಟ ಕಾಲದವರೆಗೆ ನಡೆಯುತ್ತಿರುವ ಮುಷ್ಕರಕ್ಕೆ ಸಂಪೂರ್ಣ ಬೆಂಬಲವಿದೆ ಎಂದು ಡಾ. ಅಣ್ಣಾಭಾವು ಸಾಠೆ ಸಂಟನಾ ಸಮಿತಿ ಪದಾಧಿಕಾರಿಗಳು ತಿಳಿಸಿದರು.

ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಿದರೆ ನಮ್ಮ ಮಹಾನಗರಗಳು ಶುಚಿತ್ವ ಹಾಗೂ ಅಭಿವೃದ್ಧಿ ಹೊಂದಬಹುದು ಎಂದರು.