ಜಿಲ್ಲೆ

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಿ

ಆಲೂರು : ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ತಹಸೀಲ್ದಾರ್ ಶಿರೀನ್‌ತಾಜ್ ಮನವಿ ಮಾಡಿದರು.

ವಿಶ್ವ ಜನಸಂಖ್ಯೆ ದಿನಾಚರಣೆ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಜಾಗೃತಿ ರಥಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಎಲ್ಲರೂ ಜಾಗೃತರಾಗಬೇಕಿದೆ. ಇಲ್ಲವಾದಲ್ಲಿ ಭವಿಷ್ಯದಲ್ಲಿ ಹಲವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ, ಜನಸಂಖ್ಯೆ ನಿಯಂತ್ರಣ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ದೇಶದ ಹಿತದೃಷ್ಟಿಯಿಂದ ದಂಪತಿ ಕುಟುಂಬ ಕಲ್ಯಾಣ ವಿಧಾನಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.

ತಾ.ಪಂ. ಇಒ ಸತೀಶ್, ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಚಿನ್ನನಾಗಪ್ಪ, ದಂತ ವೈದ್ಯ ಡಾ.ಅನಂತರಾಜು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸತೀಶ್ ಉಪಸ್ಥಿತರಿದ್ದರು.