ಜಿಲ್ಲೆ

ದಸರಾ ಉದ್ಘಾಟನೆ ವಿಚಾರ ಸುಪ್ರೀಂ ಅಂಗಳಕ್ಕೆ; ನಾಳೆ ತುರ್ತು ವಿಚಾರಣೆ| Mysore Dasara

Mysuru Dasara; ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಿದಂತಹ ವಿಚಾರ ಇದೀಗ ಸುಪ್ರೀಂ ಕೋರ್ಟ್‌ ಅಂಗಳಕ್ಕೆ ತಲುಪಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹೆಚ್‌ಎಸ್‌ ಗೌರವ್‌ ಸುಪ್ರೀಂನಲ್ಲಿ ಪ್ರಶ್ನೆ ಮಾಡಿದ್ದಾರೆ.

ಇವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಇದೇ 22 ರಂದು ದಸರಾ ಉದ್ಘಾಟನೆ ನಡೆಯಲಿದೆ. ಆದ್ದರಿಂದ ತುರ್ತು ಅರ್ಜಿ ವಿಚಾರಣೆ ಮಾಡಬೇಕು ಎಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಇನ್ನೂ ಈ ಅರ್ಜಿಯನ್ನು ಪುರಸ್ಕರಿಸಿರುವ ಕೋರ್ಟ್‌ ಶುಕ್ರವಾರ ಅರ್ಜಿಯ ವಿಚಾರಣೆ ನಡೆಸುವುದಾಗಿ ಹೇಳಿದೆ.

ಮೈಸೂರು ದಸರಾ ಉದ್ಘಾಟನೆಯನ್ನ ಮಾಡಬಾರದು ಎಂದು ವಿರೋಧಿಸಿ, ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರ ಆಹ್ವಾನವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಮತ್ತಿತರರು ಸಲ್ಲಿಸಿದ್ದ ಮೂರು ಅರ್ಜಿಗಳನ್ನು ಈಗಾಗಲೇ ಹೈಕೋರ್ಟ್ ವಜಾಗೊಳಿಸಿದೆ. (ಏಜೆನ್ಸೀಸ್)