ಜಿಲ್ಲಾ ಯೂಥ್ ಪಾರ್ಲಿಮೆಂಟ್ ಆಯೋಜಿಸಿದ ರಾಷ್ಟ್ರಮಟ್ಟದಲ್ಲಿ ಭಾಷಣ ಸ್ಪರ್ಧೆಯಲ್ಲಿ ಭಾಗಿಯಾದ ವಿಜಯಪುರದ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸುಪ್ರಿಯಾ ಬನಸೋಡೆ ಅವರಿಗೆ ಸಂಸ್ಥೆಯ ಸಿಬ್ಬಂದಿ ಪ್ರಶಸ್ತಿ ಪತ್ರ ಹಸ್ತಾಂತರಿಸಿದರು. ಡಾ. ವೈ. ತಮ್ಮಣ್ಣ, ಸವಿತಾ ಲಮಾಣಿ, ಪ್ರೊ. ವಿ.ಎಸ್. ಬಗಲಿ ಮತ್ತಿತರರಿದ್ದಾರೆ. 
ಜಿಲ್ಲೆ

ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸುಪ್ರಿಯಾ ಸಾಧನೆ

ದತ್ತಾತ್ರೇಯ ಪಿ ಕುಲಕರ್ಣಿ

ವಿಜಯಪುರ : ನಗರದ ಬಿಎಲ್‌ಡಿಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸುಪ್ರಿಯಾ ಬನಸೋಡೆ ಜಿಲ್ಲಾ ಯೂಥ್ ಪಾರ್ಲಿಮೆಂಟ್ ವತಿಯಿಂದ ನಡೆದ ರಾಷ್ಟ್ರಮಟ್ಟದ ‘ವಾಟ್ ಡಸ್ ವಿಕಸಿತ್ ಭಾರತ ಮೀನ್ಸ್ ಟು ಮಿ’ ಎಂಬ ವಿಷಯದ ಕುರಿತ ಭಾಷಣ ಸ್ಪರ್ಧೆಯಲ್ಲಿ ಗಮನ ಸೆಳೆದಿದ್ದಾರೆ.

ನವದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಸರ್ಕಾರದ ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಯುವ ವ್ಯವಹಾರಗಳ ಇಲಾಖೆ ವತಿಯಿಂದ ಏ. 2 ರಂದು ನಡೆದ ವಿಕಸಿತ್ ಭಾರತ್ ಯುವ ಸಂಸತ್ತು-2025ರ ರಾಷ್ಟ್ರಮಟ್ಟದಲ್ಲಿ ರಾಜ್ಯದ ಏಕೈಕ ವಿದ್ಯಾರ್ಥಿನಿಯಾಗಿ ಪ್ರತಿನಿಧಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಸುಪ್ರಿಯಾ ಬನಸೋಡೆ ಅವರು, ಅದಕ್ಕೂ ಮುನ್ನ ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಮತ್ತು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದರು.

ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ವಿ.ಎಸ್. ಬಗಲಿ, ಪ್ರಾಚಾರ್ಯ ಡಾ. ವೈ. ತಮ್ಮಣ್ಣ, ಐಕ್ಯೂಎಸಿ ಸಂಯೋಜಕಿ ಡಾ. ಭಕ್ತಿ ಮಹೇಂದ್ರಕರ, ಎನ್‌ಎಸ್‌ಎಸ್ ಅಧಿಕಾರಿಗಳಾದ ವಿ.ಎಸ್. ನಂದೇಶ, ಡಾ. ಸವಿತಾ ಲಮಾಣಿ, ಹಿರಿಯ ಪ್ರಾಧ್ಯಾಪಕ ಡಾ. ಎ.ಟಿ. ಶ್ರೀನಿವಾಸ, ಪಿ.ಎಸ್. ತೊಳನುರ ಅಭಿನಂದನೆ ಸಲ್ಲಿಸಿದ್ದಾರೆ.