ತಾವರಗೇರಾ: ಸಂಗನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಶುಕ್ರವಾರ ಡೆಂೆ ವಿರೋಧಿ ಮಾಸಾಚರಣೆ ನಡೆಯಿತು.
ಹಿರಿಯ ಆರೋಗ್ಯ ಸಹಾಯಕಿ ಶಂಕ್ರಮ್ಮ ಮಾತನಾಡಿ, ಡೆಂೆ ಜ್ವರ ಮತ್ತು ಚಿಕನ್‌ಗುನ್ಯಾ ರೋಗಗಳು ಸೊಳ್ಳೆಗಳಿಂದ ಹರಡುತ್ತವೆ. ಇದನ್ನು ತಡೆಯಲು ಮನೆ ಸುತ್ತಲೂ ಸ್ವಚ್ಛ ಪರಿಸರ ನಿರ್ಮಾಣ ಮಾಡಬೇಕು. ರಾತ್ರಿ ಮಲಗುವಾಗ ಸೊಳ್ಳೆ ಪರದೆ ಕಟ್ಟಿಕೊಳ್ಳಬೇಕು. ಜ್ವರ ಇದ್ದರೆ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.
ಮುಖ್ಯಶಿಕ್ಷಕ ಬಸವರಾಜ ಅಂಗಡಿ ಮಾತನಾಡಿ, ವಿದ್ಯಾರ್ಥಿಗಳು ಸ್ವಚ್ಛವಾದ ಬಟ್ಟೆ ಧರಿಸಬೇಕು. ಊಟ ಮಾಡುವ ಮುಂಚೆ ಕೈಗಳನ್ನು ಸರಿಯಾಗಿ ತೊಳೆದು ಕೊಳ್ಳಬೇಕು. ನೀರು ಸಂಗ್ರಹ ತೊಟ್ಟಿಯನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು. ಆರೋಗ್ಯಾಧಿಕಾರಿ ಹನಮಂತಪ್ಪ ಕರಡಿ, ಆಶಾ ಕಾರ್ಯಕರ್ತೆ ರೇಣುಕಾ, ಅಂಗನವಾಡಿ ಕಾರ್ಯಕರ್ತೆ ಗೌರಮ್ಮ, ಅನ್ವರ್ ಸಾಬ ಇತರರಿದ್ದರು.