ಮಾನ್ವಿ ತಾಲೂಕಿನ ಹಿರೇಕಟ್ನೆಕಲ್ ಗ್ರಾಮದಲ್ಲಿ ಮಳೆಯಿಂದ ಹಾನಿಯಾದ ಹತ್ತಿ ಬೆಳೆಯನ್ನು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ವೀಕ್ಷಣೆ ಮಾಡಿದರು. ಜೆಡಿಎಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ರೈತ ಘಟಕದ ಅಧ್ಯಕ್ಷ ಶರಣಪ್ಪಗೌಡ ಮದ್ಲಾಪುರ, ತಾಲೂಕು ವಕ್ತಾರ ನಾಗರಾಜ ಭೋಗಾವತಿ ಇತರರಿದ್ದರು. 
ಜಿಲ್ಲೆ

ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿ

ಮಾನ್ವಿ: ನಿರಂತರ ಮಳೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹತ್ತಿ, ಜೋಳ ಬೆಳೆ ಹಾಳಾಗಿದ್ದು, ಸರ್ಕಾರ ಕೂಡಲೇ ರೈತರಿಗೆ ಪರಿಹಾರ ಘೋಷಣೆ ಮಾಡಬೇಕು ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಒತ್ತಾಯಿಸಿದರು.

ತಾಲೂಕಿನ ಹಿರೇಕೊಟ್ನೆಕಲ್, ಪೋತ್ನಾಳ್, ಜೇನೂರು, ತಡಕಲ್ ಸೇರಿದಂತೆ ಸುತ್ತ್ತಲಿನ ಗ್ರಾಮಗಳಿಗೆ ಭಾನುವಾರ ಭೇಟಿ ನೀಡಿ ಮಾತನಾಡಿದರು. ನಿರಂತರ ಮಳೆ ಸುರಿಯುತ್ತಿರುವುದರಿಂದ ಸಾವಿರಾರು ಎಕರೆ ಬೆಳೆ ನಷ್ಟವಾಗಿದೆ. ಸಾಲ ಮಾಡಿ ಬೆಳೆದ ಹತ್ತಿ, ಜೋಳ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿರುವುದರಿಂದ ರೈತರು ಸಂಕಷ್ಟ ಅನುಭವಿಸುವಂತಾಗಿದೆ. ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಶೀಘ್ರ ಸಮೀಕ್ಷೆ ನಡೆಸಿ ಬೆಳೆ ನಷ್ಟದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಜ್. ಮೌನೇಶ್‌ಗೌಡ, ತಾಲೂಕು ಹಿಂದುಳಿದ ವರ್ಗದ ಅಧ್ಯಕ್ಷ ಲಕ್ಷ್ಮಣ ಯಾದವ್, ಎಸ್ಟಿ ಘಟಕದ ಅಧ್ಯಕ್ಷ ವಿಜಯ್ ನಾಯಕ ಇತರರಿದ್ದರು.