ಗಂಗೊಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ‌್ಯಾಂಕ್ ಪಡೆದ ಗಂಗೊಳ್ಳಿ ಎಸ್.ವಿ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್.ಗಾಣಿಗ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು.
ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ನಿಯೋಜಿತ ಅಧ್ಯಕ್ಷ ಕೃಷ್ಣ ಪೂಜಾರಿ, ಮಾಜಿ ಅಧ್ಯಕ್ಷರಾದ ಜನಾರ್ದನ ಪೂಜಾರಿ, ವಾಸುದೇವ ಶೇರುಗಾರ್, ದಯಾನಂದ ಗಾಣಿಗ, ನಾರಾಯಣ ಇ.ನಾಯ್ಕ, ಬಿ.ಲಕ್ಷ್ಮೀಕಾಂತ ಮಡಿವಾಳ, ಗಂಗೊಳ್ಳಿ ಗ್ರಾಪಂ ಸದಸ್ಯೆ ಮಮತಾ ಎಸ್.ಗಾಣಿಗ, ಶಿವಾನಂದ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.