ವಿಜಯವಾಣಿ ಸುದ್ದಿಜಾಲ ಗದಗ,
ಚುನಾವಣಾ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ರೋಣ ತಾಲೂಕಿನ ಮಲ್ಲಾಪುರ ಉಪವಿಭಾಗದ ಎಂಆರ್ಬಿಸಿ ಜೆಇ ಮಹೇಶ ರಮಾವತ ಅವರನ್ನು ತಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಮಹೇಶ ರಮಾವತ ಅವರನ್ನು 67&ರೋಣ ವಿಧಾನಸಭಾ ೇತ್ರದ ವ್ಯಾಪ್ತಿಯಲ್ಲಿ ಬರುವ ಗಜೇಂದ್ರಗಡ ತಾಲೂಕಿನ ಗಜೇಂದ್ರಗಡ&ರೋಣ ರಸ್ತೆ, ಪುರ್ತಗೇರಿ ಕ್ರಾಸ್ ಚೆಕ್ ಪೋಸ್ಟನಲ್ಲಿ ತನಿಖಾ ಕಾರ್ಯವನ್ನು ನಿರ್ವಹಿಸಲು ಆದೇಶಿಸಲಾಗಿತ್ತು. ಸದರಿಯವರು ನಿಗದಿತ ಆದೇಶದಂತೆ ಚುನಾವಣಾ ಕರ್ತವ್ಯಕ್ಕೆ ಗೈರು ಹಾಜರಾಗಿ ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ$್ಯ ಹಾಗೂ ಬೇಜವಾಬ್ದಾರಿತನ ತೋರಿಸಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 134ರ ಉಲ್ಲಂನೆ ಮಾಡಿದ ಮಹೇಶ ರಮಾವತ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.