ಕುಶಾಲನಗರ ತಾಲೂಕು ಸಮಾನ ಮನಸ್ಕರ ವತಿಯಿಂದ ಕುಡಾ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಶಂಶುದ್ಧೀನ್, ಕೆ.ಬಿ.ರಾಜು, ಜಯಪ್ರಕಾಶ್, ಆದಂ, ಪರಮೇಶ್, ಸಚಿನ್ ಇತರರು ಇದ್ದರು.  
ಜಿಲ್ಲೆ

ಕುಡಾ ಸದಸ್ಯ ಕಾರ್ಯದರ್ಶಿಯನ್ನು ಅಮಾನತು ಮಾಡಿ

ಕುಶಾಲನಗರ: ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ವಿನಾಕಾರಣ ತೊಡಕುಂಟು ಮಾಡುವ ಕುಶಾಲನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸ್ವಾತಿ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ತಾಲೂಕು ಸಮಾನ ಮನಸ್ಕರ ವತಿಯಿಂದ ಕುಡಾ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು.

ಕುಶಾಲನಗರ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಆದಂ ಮಾತನಾಡಿ, ಸಾರ್ವಜನಿಕರೊಡನೆ ದರ್ಪದಿಂದ ವರ್ತಿಸುವ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು. ಹಣಕ್ಕೆ ಬೇಡಿಕೆಯಿಡುವ ಭ್ರಷ್ಟ ಅಧಿಕಾರಿಗಳು ಕುಶಾಲನಗರಕ್ಕೆ ಬೇಕಾಗಿಲ್ಲ. ಸಂಬಂಧಪಟಟ್ವರು ಕ್ರಮ ವಹಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಮಾತನಾಡಿ, ಸಾರ್ವಜನಿಕರ ಕಡತ ಹರಿದು ಅಧಿಕಾರದ ದರ್ಪ ತೋರುವ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು. ಪ್ರತಿಭಟನಾಕಾರರ ಬೇಡಿಕೆ ಈಡೇರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಗುತ್ತದೆ ಎಂದು ಎಚ್ಚರಿಸಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಆಗಮಿಸಬೇಕು. ಇಲ್ಲದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಜಿಲ್ಲಾ ಉಪವಿಭಾಗಾಧಿಕಾರಿ ವಿನಾಯಕ್ ನರವಡೆ, ಪ್ರತಿಭಟನಾಕಾರರ ದೂರು ಆಲಿಸಿದರು.

ಬಳಿಕ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಕುಡಾ ಸದಸ್ಯ ಕಾರ್ಯದರ್ಶಿ ವಿರುದ್ಧ ಸಾರ್ವಜನಿಕರಿಂದ ದೂರು ಬಂದಿದೆ. ಈ ಬಗ್ಗೆ ಅವರಿಗೆ ನೋಟಿಸ್ ನೀಡಲಾಗುವುದು. ನಂತರ ಈ ವಿಚಾರವನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗವುದು. ಕುಡಾ ಕಚೇರಿಯಲ್ಲಿ ಸಿಸಿ ಕ್ಯಾಮರಾ ಹಾಗೂ ಬಯೋಮೆಟ್ರಿಕ್ ಅಳವಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.

ಎಸಿ ಭರವಸೆ ಮೇರೆಗೆ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು. ದಲಿತ ಸಂಘರ್ಷ ಸಮಿತಿ ಭೀಮಾವಾದ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಕೆ.ಬಿ.ರಾಜು, ಡಾ.ಬಿ.ಆರ್.ಅಂಬೇಡ್ಕರ್ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಸಿ.ಜಯಪ್ರಕಾಶ್, ಉಪಾಧ್ಯಕ್ಷ ಇಬ್ರಾಹಿಂ, ನಗರಾಧ್ಯಕ್ಷ ಶರಣ್, ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಜಗದೀಶ್, ಮಹಿಳಾ ಸಮಾಜದ ಅಧ್ಯಕ್ಷೆ ಸೆಲಿನ್ಾ ಡಿ ಕುನ್ನಾ, ಕಾರ್ಯದರ್ಶಿ ಶೈಲಾ ಕುಮಾರಿ, ಕರ್ನಾಟಕ ಕಾವಲು ಪಡೆ ತಾಲೂಕು ಅಧ್ಯಕ್ಷೆ ಇಂದಿರಾ, ಹರದೂರು ಗ್ರಾ.ಪಂ ಸದಸ್ಯ ಎಂ.ಎ.ಮುಸ್ತಫ, ಕಾಂಗ್ರೆಸ್ ಮುಖಂಡ ಎಂ.ಇ.ಮುಸ್ತಫ, ಆರ್.ಪಿ.ಐ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಕೆ.ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್‌ಕುಮಾರ್, ಹೋಬಳಿ ಅಧ್ಯಕ್ಷ ಮಂಜುನಾಥ್, ಪ್ರಮುಖರಾದ ಪರಮೇಶ್, ನಯಾಜ್, ಶಕೀಲ್, ಸಚಿನ್, ಅಸ್ಲಂ, ನಯಾಜ್ ಡೀನ್, ಬಾಬು ಇದ್ದರು.