ಮೈಸೂರು: ಕರ್ತವ್ಯದ ಲೋಪದ ಹಿನ್ನಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಆರ್.ಶೇಷ ಅವರನ್ನು ಅಮಾನತು ಮಾಡಲಾಗಿದೆ.
ಮೈಸೂರು ತಾಲೂಕಿನ ಮದರಗಳ್ಳಿ ಗ್ರಾಮದಲ್ಲಿ ಸರ್ವೆ ನಂ. 73/1 ರಲ್ಲಿನ 4 ಎಕರೆ 19 ಗುಂಟೆ ವಿಸ್ತೀರ್ಣದ ಜಮೀನನ್ನು ವ್ಯವಸಾಯದಿಂದ ವಸತಿ ವಲಯಕ್ಕೆ ಭೂ ಉಪಯೋಗ ಬದಲಾವಣೆಗೆ ಅರ್ಜಿ ಸಲ್ಲಿಕೆಯಾಗಿದ್ದುಘಿ, ಈ ಜಮೀನಲ್ಲಿ ಏರ್‌ಪೋರ್ಟ್‌ನ ಗಡಿ ಹಾದು ಹೋಗಿದ್ದುಘಿ, ಈ ಬಗ್ಗೆ ಪರಿಶೀಲನೆ ನಡೆಸದೇ ಕರ್ತವ್ಯ ಲೋಪ ವೇಸಗಿರುವ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ನಗರಾಭಿವೃದ್ದಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ. ಲತಾ ಆದೇಶದಲ್ಲಿ ತಿಳಿಸಿದ್ದಾರೆ.