ಜಿಲ್ಲೆ

ಸತತ ಪ್ರಯತ್ನ ಕಠಿಣ ಪರಿಶ್ರಮ ಯಶಸ್ಸಿಗೆ ದಾರಿ

ಮಂಜುನಾಥ ಅಂಗಡಿ

ಧಾರವಾಡ: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಬೇಕು. ಮಾಹಿತಿ ತಂತ್ರಜ್ಞಾನ ಹಾಗೂ ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಸತತ ಪ್ರಯತ್ನ ಹಾಗೂ ಕಠಿಣ ಪರಿಶ್ರಮ ಯಶಸ್ಸಿಗೆ ದಾರಿ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ. ಸಿ. ಕೃಷ್ಣಮೂರ್ತಿ ಹೇಳಿದರು.
ನಗರದ ವಿದ್ಯಾಗಿರಿಯ ಸುವರ್ಣ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಾರ್ಷಿಕೋತ್ಸವ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾಗಿರಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ ಮಾತನಾಡಿ, ವಿದ್ಯಾರ್ಥಿಗಳು ಸಮಯಕ್ಕೆ ಹೆಚ್ಚಿನ ಮಹತ್ವ ಕೊಡಬೇಕು. ಕ್ರಿಯಾಶೀಲ ಮತ್ತು ಪ್ರಯತ್ನಶೀಲ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು.
ಸAಸ್ಥೆಯ ಅಧ್ಯಕ್ಷ ವಿಶ್ವನಾಥ ಅಮರಶೆಟ್ಟಿ ಮಾತನಾಡಿ, ಸಂಸ್ಥೆಯು ಪ್ರಾರಂಭದಿAದಲೂ ಉದ್ಯೋಗಾಧಾರಿತ ಹಾಗೂ ಕೌಶಲ್ಯಾಧಾರಿತ ಶಿಕ್ಷಣ ಕೊಡುತ್ತಿದೆ. ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪ್ರೊ. ಗಂಗಾ ಗಾವಡೆ, ಕಾಲೇಜು ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು. ಪ್ರಾಚಾರ್ಯ ಪ್ರೊ. ಸಾವಿತ್ರಿ ಬೆಣ್ಣಿ ಸ್ವಾಗತಿಸಿದರು.